ಥಾಣೆ: ಮಹಾರಾಷ್ಟ್ರದ ಥಾಣೆ ನಗರದಲ್ಲಿ ವಾಸವಾಗಿದ್ದ ಮಹಿಳೆಯೊಬ್ಬರನ್ನು ಆಕೆಯ ಸಹಜೀವನ ಸಂಗಾತಿಯೇ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಸುನೀತಾ ಕಾಂಬಳೆ (35) ಎಂದು ಗುರುತಿಸಲಾಗಿದೆ.
ಸಂತ್ರಸ್ತೆ ತನ್ನ ಪತಿಯಿಂದ ಬೇರ್ಪಟ್ಟು ಆರೋಪಿಯೊಂದಿಗೆ ವಾಸಿಸುತ್ತಿದ್ದರು. ಕಿಸಾನ್ ನಗರದಲ್ಲಿ ವಾಸವಾಗಿದ್ದ ಈ ಜೋಡಿ ಆಗಾಗ ಸಣ್ಣ ಪುಟ್ಟ ವಿಷಯಗಳಿಗೆ ಜಗಳ ಆಡುತ್ತಿದ್ದರು. ಆದರೆ ಮಾರ್ಚ್ 19ರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಜಗಳವಾಡಿದ್ದಾರೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ ಆರೋಪಿಯು(35) ಆಕೆಯನ್ನು ಕುಡುಗೋಲಿನಿಂದ ಕೊಂದಿದ್ದಾನೆ ಎಂದು ಪೊಲೀಸ್ ಅಧಿಕಾರಿ ಕಿರಣಕುಮಾರ ಕಬಾಡಿ ಮಾಹಿತಿ ನೀಡಿದ್ದಾರೆ.
ಆರೋಪಿಯು ಹತ್ಯೆ ನಡೆಸಿದ ಬಳಿಕ ಕುಡುಗೋಲು ಹಾಗೂ ಸಂತ್ರಸ್ತೆಯ ಮೊಬೈಲ್ ಫೋನ್ ಅನ್ನು ಎಸೆದು ಸಾಕ್ಷ್ಯವನ್ನು ನಾಶಪಡಿಸಲು ಪ್ರಯತ್ನಿಸಿದ್ದಾನೆ. ಬಂಧಿತ ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು 201 (ಸಾಕ್ಷ್ಯ ನಾಶಪಡಿಸಿದ ಆರೋಪ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಕಬಾಡಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.