ಬುಧವಾರ, ಜನವರಿ 20, 2021
29 °C

ಮುಂಬೈ| ಬೈಕ್‌ ಸವಾರರಿಂದ ಎನ್‌ಸಿಪಿ ಕಾರ್ಯಕರ್ತೆಯ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಎನ್‌ಸಿಪಿ ಕಾರ್ಯಕರ್ತೆಯೊಬ್ಬರನ್ನು ಬೈಕ್‌ ಸವಾರರಿಬ್ಬರು ಗಂಟಲು ಕತ್ತರಿಸಿ ಹತ್ಯೆಗೈದಿರುವ ಘಟನೆ ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದರು.

ಸೋಮವಾರ ರಾತ್ರಿ 8.20ರ ಸುಮಾರಿಗೆ ರೇಖಾ ಬಾಹುಸಾಹೇಬ್‌ ಜಾರೆ ಅವರು ತನ್ನ ತಾಯಿ, ಮಗ ಮತ್ತು ಸ್ನೇಹಿತೆಯೊಂದಿಗೆ ಪುಣೆಯಿಂದ ಅಹ್ಮದ್‌ನಗರಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದರು.

ಆರೋಪಿಗಳು ಪಾರ್ನರ್‌ನ ಜಟಗಾಂವ್ ಘಾಟ್‌ನಲ್ಲಿ ರೇಖಾ ಅವರ ಕಾರನ್ನು ತಡೆದರು. ಅಲ್ಲಿ ಆರೋಪಿಗಳು ಮತ್ತು ರೇಖಾ ಅವರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಆರೋಪಿಯೊಬ್ಬ ರೇಖಾ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದು,  ಗಂಟಲು ಕತ್ತರಿಸಿ ಕೊಂದಿದ್ದಾರೆ ಎನ್ನಲಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ತಲುಪುವ ಮುನ್ನವೇ ಅವರು ಮೃತಪಟ್ಟಿದ್ದರು ಎಂದು ಅವರು ಮಾಹಿತಿ ನೀಡಿದರು.

ಅಹ್ಮದ್‌ನಗರ ಸುಪಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಈ ಹತ್ಯೆ ಹಿಂದಿರುವ ಕಾರಣಗಳನ್ನು ಪತ್ತೆಹಚ್ಚುವ ಪ್ರಯತ್ನವನ್ನು ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.

ರೇಖಾ ಬಾಹುಸಾಹೇಬ್‌ ಜಾರೆ ಅವರು ಯಶಸ್ವಿನಿ ಮಹಿಳಾ ಬ್ರಿಗೇಡ್ ಎಂಬ ಮಹಿಳಾ ಸಂಘಟನೆಯ ಅಧ್ಯಕ್ಷರೂ ಆಗಿದ್ದರು. ಈ ಸ್ಥಳೀಯ ಸಂಸ್ಥೆ ಮಹಿಳಾ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು