ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂಪುರ್‌ ಶರ್ಮಾ 'ಧೈರ್ಯಶಾಲಿ ಮಹಿಳೆ' ಎಂದ ಮುಸ್ಲಿಂ ಯುವಕನ ಬಂಧನ

Last Updated 12 ಜೂನ್ 2022, 14:34 IST
ಅಕ್ಷರ ಗಾತ್ರ

ಥಾಣೆ: ಮಾಜಿ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಅವರನ್ನು 'ಧೈರ್ಯಶಾಲಿ ಮಹಿಳೆ' ಎಂದು ಶ್ಲಾಘಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ 19 ವರ್ಷದ ಮುಸ್ಲಿಂ ಯುವಕನನ್ನು ಬಂಧಿಸಲಾಗಿದೆ.

ಬಂಧಿತ ವ್ಯಕ್ತಿ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ನಗರದ ನಿವಾಸಿ. ಪ್ರವಾದಿ ಮಹಮ್ಮದ್‌ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ ಮಾಡಿದ ಆರೋಪವೂ ಈತನ ಮೇಲಿದೆ.

ಸಾಮಾಜಿಕ ಜಾಲತಾಣದ ಪೋಸ್ಟ್‌ ವೈರಲ್‌ ಆದ ಬೆನ್ನಲ್ಲೇ ಉದ್ರಿಕ್ತ ಗುಂಪು ಯುವಕನ ಮನೆಗೆ ತೆರಳಿ, ಆತನ ಮೇಲೆ ಹಲ್ಲೆ ನಡೆಸಿ ಪ್ರಶ್ನಿಸುತ್ತಿರುವ ವಿಡಿಯೊ ಕೂಡ ವೈರಲ್‌ ಆಗಿದೆ. ಆತನ ಮನೆಯ ಮುಂದೆ ಮುಸ್ಲಿಂ ಸಮುದಾಯದ ನೂರಾರು ಮಂದಿ ಪ್ರತಿಭಟನೆ ನಡೆಸಿದ್ದಾರೆ.

ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಯುವಕನನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಪೊಲೀಸರು ಯುವಕನ್ನು ವಶಕ್ಕೆ ಪಡೆದ ವಿಡಿಯೊ ಕೂಡ ವೈರಲ್‌ ಆಗಿದೆ. ಘಟನೆಗೆ ಸಂಬಂಧಿಸಿ ಇದುವರೆಗೆ ಎಫ್‌ಐಆರ್‌ ದಾಖಲಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರವಾದಿ ಮಹಮ್ಮದ್‌ ಅಪಮಾನ ವಿಚಾರಕ್ಕೆ ಸಂಬಂಧಿಸಿ ನೂಪರ್‌ ಶರ್ಮಾ ಅವರಿಗೆ ಸೋಮವಾರ ಹೇಳಿಕೆ ದಾಖಲಿಸುವಂತೆ ಭಿವಂಡಿ ಪೊಲೀಸರು ಸಮನ್ಸ್‌ ನೀಡಿದ್ದಾರೆ. ಮತ್ತೊರ್ವ ಪದಚ್ಯುತ ಬಿಜೆಪಿ ಮುಖಂಡ ನವೀನ್‌ ಕುಮಾರ್‌ ಜಿಂದಾಲ್‌ ಅವರಿಗೂ ಜೂನ್‌ 15ರಂದು ತಮ್ಮ ಹೇಳಿಕೆಯನ್ನು ದಾಖಲಿಸುವಂತೆ ಭಿವಂಡಿ ಪೊಲೀಸರು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT