ಬುಧವಾರ, ಅಕ್ಟೋಬರ್ 21, 2020
21 °C

ಮಹಾರಾಷ್ಟ್ರ: ಐವರು ನಕ್ಸಲರ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಗಪುರ: ಮಹಾರಾಷ್ಟ್ರದ ಗಡಚಿರೋಲಿ ಜಿಲ್ಲೆಯಲ್ಲಿ, ಕೊಸ್ಮಿ–ಕಿಸ್ನೇಲಿ ಅರಣ್ಯ ಪ್ರದೇಶದಲ್ಲಿ ಭಾನುವಾರ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ ಐವರು ನಕ್ಸಲರು ಮೃತಪಟ್ಟಿದ್ದಾರೆ.

ಸಿ–60 ಕಮಾಂಡೊಗಳು ಆ ಭಾಗದಲ್ಲಿ ಕಾರ್ಯಾಚರಣೆ ಕೈಗೊಂಡಿದ್ದ ವೇಳೆ ನಕ್ಸಲರು ಗುಂಡಿನ ದಾಳಿ ನಡೆಸಿದರು. ಪೊಲೀಸರು ಪ್ರತಿರೋಧ ತೋರಿದ್ದು, ಬಳಿಕ ನಕ್ಸಲರು ಓಡಿಹೋದರು. ತಪಾಸಣೆಯ ವೇಳೆ ಐವರು ನಕ್ಸಲರ ಶವ ಪತ್ತೆಯಾಗಿದೆ. ಅವರ ಗುರುತು ಪತ್ತೆ ಹಚ್ಚಬೇಕಾಗಿದೆ. ಸ್ಥಳದಿಂದ ರೈಫಲ್ ವಶಕ್ಕೆ ಪಡೆಯಲಾಗಿದೆ ಎಂದು ಎಸ್‌ಪಿ ಅಂಕಿತ್ ಗೋಯಲ್ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು