ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ ಗೃಹ ಸಚಿವರಿಗೆ ವರ್ಷದಲ್ಲಿ ಎರಡನೇ ಬಾರಿ ಕೋವಿಡ್‌ ದೃಢ

Last Updated 28 ಅಕ್ಟೋಬರ್ 2021, 7:21 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ಗೃಹ ಸಚಿವ ದಿಲೀಪ್‌ ವಲ್ಸೆ ಪಾಟೀಲ್‌ ಅವರಿಗೆ ವರ್ಷದಲ್ಲಿ ಎರಡನೇ ಬಾರಿ ಕೋವಿಡ್ ದೃಢಪಟ್ಟಿದೆ.

ದಿಲೀಪ್‌ ಅವರು ಕೋವಿಡ್‌ ಲಸಿಕೆಯ ಎರಡೂ ಡೋಸ್‌ಗಳನ್ನು ತೆಗೆದುಕೊಂಡಿದ್ದಾರೆ. ಸೌಮ್ಯ ರೋಗ ಲಕ್ಷಣಗಳು ಕಂಡು ಬಂದಿದ್ದ ಕಾರಣ ಕೋವಿಡ್‌ ಪರೀಕ್ಷೆಗೆ ಒಳಗಾದೆ ಎಂದು ವಾಲ್ಸೆ ಗುರುವಾರ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

‘ನನಗೆ ಕೋವಿಡ್‌ ದೃಢಪಟ್ಟಿದೆ. ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ಸಲಹೆಯನ್ನು ಅನುಸರಿಸುತ್ತಿದ್ದೇನೆ. ನಾಗ್ಪುರ, ಅಮರಾವತಿ ಪ್ರವಾಸ ಮತ್ತು ಇತರ ಕಾರ್ಯಕ್ರಮಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಅವರು ಟ್ವೀಟ್‌ನಲ್ಲಿ ಒತ್ತಾಯಿಸಿದ್ದಾರೆ.

ಎನ್‌ಸಿಪಿ ನಾಯಕರೂ ಆಗಿರುವ ದಿಲೀಪ್‌ ಅವರಿಗೆ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕೋವಿಡ್‌ ದೃಢಪಟ್ಟಿತ್ತು.

ಮಹಾರಾಷ್ಟ್ರದಲ್ಲಿ ಬುಧವಾರ 1,485 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 38 ಜನರು ಮೃತಪಟ್ಟಿದ್ದಾರೆ ಎಂದು ರಾಜ್ಯದ ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT