ಬುಧವಾರ, ಜನವರಿ 20, 2021
22 °C

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಅಪರಾಧಿಗೆ ಕಠಿಣ ಜೈಲುಶಿಕ್ಷೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಲಿಬಾಗ್‌ (ಮಹಾರಾಷ್ಟ್ರ): ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ 49 ವರ್ಷದ ವ್ಯಕ್ತಿಯೊಬ್ಬರಿಗೆ ರಾಯ್‌ಗಡ್‌ ಜಿಲ್ಲೆಯ ಅಲಿಬಾಗ್‌ನಲ್ಲಿರುವ ವಿಶೇಷ ನ್ಯಾಯಾಲಯವೊಂದು, ಒಂದು ವರ್ಷದ ಕಠಿಣ ಜೈಲುಶಿಕ್ಷೆಯನ್ನು ವಿಧಿಸಿದೆ.

ಜೈಲು ಶಿಕ್ಷೆಯ ಜೊತೆಗೆ ಅಪರಾಧಿ ಅಶ್ವಿನ್‌ ಅರವಿಂದ್‌ ಪುರಾಣಿಕ್‌ಗೆ ₹5 ಸಾವಿರ ದಂಡವನ್ನೂ ವಿಧಿಸಿ, ನ್ಯಾಯಾಧೀಶರಾದ ಎಸ್‌.ಎಸ್.ಶೇಖ್‌ ಆದೇಶ ಹೊರಡಿಸಿದ್ದಾರೆ.

ವಿದ್ಯಾರ್ಥಿನಿಯರು ಶಾಲೆಗೆ ತೆರಳುತ್ತಿದ್ದ ವೇಳೆ ಅಶ್ವಿನ್‌ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ದೂರು ದಾಖಲಾಗಿತ್ತು. ಕಳೆದ ವರ್ಷ ಆಗಸ್ಟ್‌ನಲ್ಲಿ ಈ ಘಟನೆ ನಡೆದಿತ್ತು. ಬೈಕ್‌ನಲ್ಲಿ ಕುಳಿತು ವಿದ್ಯಾರ್ಥಿನಿಯರನ್ನು ಓಡಿಸುತ್ತಿದ್ದ ಈತ, ಅವರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ವಿದ್ಯಾರ್ಥಿನಿಯೊಬ್ಬಳ ತಾಯಿ ನೀಡಿದ ದೂರು ಆಧರಿಸಿ, ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು