ಗುರುವಾರ , ಆಗಸ್ಟ್ 18, 2022
25 °C

ಮಹಾರಾಷ್ಟ್ರದ ನೂತನ ಸಿಎಂ ಶಿಂಧೆ, ಡಿಸಿಎಂ ಫಡಣವೀಸ್‌ಗೆ ಪ್ರಧಾನಿ ಮೋದಿ ಶುಭಾಶಯ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಏಕನಾಥ ಶಿಂಧೆ ಹಾಗೂ ಡಿಸಿಎಂ ಆಗಿ ನೇಮಕಗೊಂಡ ದೇವೇಂದ್ರ ಫಡಣವೀಸ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.

ಗುರುವಾರ ರಾತ್ರಿ ಟ್ವೀಟ್‌ ಮಾಡಿರುವ ಅವರು, ‘ಮಹಾರಾಷ್ಟ್ರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಏಕನಾಥ ಶಿಂಧೆ ಅವರನ್ನು ಅಭಿನಂದಿಸುತ್ತೇನೆ. ತಳಮಟ್ಟದ ನಾಯಕರಾದರೂ ಅವರಿಗೆ ರಾಜಕೀಯ, ಶಾಸಕಾಂಗ ಮತ್ತು ಆಡಳಿತಾತ್ಮಕವಾಗಿ ಶ್ರೀಮಂತ ಅನುಭವವಿದೆ. ಮಹಾರಾಷ್ಟ್ರವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಅವರು ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ’ ಎಂದು ತಿಳಿಸಿದ್ದಾರೆ.

‘ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದೇವೇಂದ್ರ ಫಡಣವೀಸ್‌ ಅವರಿಗೆ ಅಭಿನಂದನೆಗಳು. ಅವರು ಪ್ರತಿ ಬಿಜೆಪಿ ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದ್ದಾರೆ. ಅವರ ಅನುಭವ ಮತ್ತು ಪರಿಣತಿ ಸರ್ಕಾರದ ಆಸ್ತಿಯಾಗಲಿದೆ. ಅವರು ಮಹಾರಾಷ್ಟ್ರದ ಬೆಳವಣಿಗೆಯ ಪಥವನ್ನು ಇನ್ನಷ್ಟು ಬಲಪಡಿಸುತ್ತಾರೆ ಎಂಬುದು ನನಗೆ ಖಾತ್ರಿಯಿದೆ’ ಎಂದು ಮೋದಿ ಟ್ವೀಟಿಸಿದ್ದಾರೆ.

ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವರೂ ಮಹಾರಾಷ್ಟ್ರದ ನೂತನ ಸಿಎಂ ಹಾಗೂ ಡಿಸಿಎಂಗೆ ಅಭಿನಂದನೆ ಕೋರಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು