ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾಶಿವರಾತ್ರಿ: ಗಂಗೆಯಲ್ಲಿ ಮಿಂದ 1.80 ಲಕ್ಷ ಜನ 

Last Updated 1 ಮಾರ್ಚ್ 2022, 10:51 IST
ಅಕ್ಷರ ಗಾತ್ರ

ಪ್ರಯಾಗ್‌ರಾಜ್‌: ಮಹಾಶಿವರಾತ್ರಿಯ ಪ್ರಯುಕ್ತ ಮಂಗಳವಾರ ಇಲ್ಲಿನ ಗಂಗಾ ನದಿಯಲ್ಲಿ 1.80 ಲಕ್ಷಕ್ಕೂ ಹೆಚ್ಚು ಜನರು ಪವಿತ್ರ ಸ್ನಾನ ಮಾಡಿದರು ಎಂದು ಅಧಿಕಾರಿಯೊಬ್ಬರು ಹೇಳಿದರು.

ದರಗಂಜ್‌ನಲ್ಲಿರುವ ನಾಗವಾಸುಕಿ ದೇವಸ್ಥಾನ ಮತ್ತು ಯಮುನಾ ತೀರದಲ್ಲಿರುವ ಮಂಕಮೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದ ಶಿವಭಕ್ತರು ಈಶ್ವರನಿಗೆ ನೀರು ಮತ್ತು ಹಾಲಿನ ಅಭಿಷೇಕ ಮಾಡುತ್ತಿದ್ದರು ಎಂದು ಮಾಘ ಮೇಳ ಪ್ರಾಧಿಕಾರ ಹೇಳಿದೆ.

ಅಪಾರ ಸಂಖ್ಯೆಯ ಭಕ್ತರು ಸೇರುವ ಹಿನ್ನೆಲೆ ಸೋಮೇಶ್ವರ ಮಹಾದೇವ, ಮಂಕಮೇಶ್ವರ, ನಾಗವಾಸುಕಿ ಮೊದಲಾದ ಶಿವಾಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ. ಭಕ್ತಾದಿಗಳ ವಾಹನ ನಿಲುಗಡೆಗೂ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿ ಹೇಳಿದರು.

ಶಿವಾಲಯಗಳ ಪ್ರದೇಶಗಳಲ್ಲಿ ಸುಮಾರು 650 ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಸೌಲಭ್ಯ ಇಲ್ಲದ ಪ್ರದೇಶಗಳಲ್ಲಿ ಸ್ಥಳೀಯ ಸಂಸ್ಥೆ ವತಿಯಿಂದ ಸಂಚಾರಿ ಶೌಚಾಲಯಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಇಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರಗಳು ಮತ್ತು ಆಸ್ಪತ್ರೆಯನ್ನೂ ತೆರೆಯಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT