ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು

Last Updated 16 ಜುಲೈ 2022, 8:51 IST
ಅಕ್ಷರ ಗಾತ್ರ

ಬಟಿಂಡಾ: ಇಲ್ಲಿನ ರಮ್ಮನ್ ಮಂಡಿಯಲ್ಲಿರುವ ಸಾರ್ವಜನಿಕ ಉದ್ಯಾನವನದಲ್ಲಿನ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅಪರಿಚಿತ ವ್ಯಕ್ತಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ, ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ವಿಧ್ವಂಸಕ ಕೃತ್ಯದ ಬಗ್ಗೆ ತಿಳಿದ ಸ್ಥಳೀಯರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ರಮ್ಮನ್ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದ್ದು, ಠಾಣಾಧಿಕಾರಿ ಹರ್ಜೋತ್ ಸಿಂಗ್ ಮಾನ್ ಅವರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಜಿಲ್ಲಾ ನಗರ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಸಿಂಗ್ಲಾ ಮಾತನಾಡಿ, ಘಟನೆಯ ಹಿಂದಿರುವವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಭರವಸೆ ನೀಡಿರುವ ಪೊಲೀಸರು,ಆರೋಪಿಗಳ ಪತ್ತೆಗೆ ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT