ಗುರುವಾರ , ಸೆಪ್ಟೆಂಬರ್ 23, 2021
28 °C
ನಕಲಿ ಮತದಾನಕ್ಕೆ ಅವಕಾಶ, ಡೆಮಾಕ್ರಟಿಕ್ ರಾಜ್ಯಪಾಲರಿಂದ ಮತಪತ್ರಗಳ ನಿಯಂತ್ರಣ

ಅಂಚೆ ಮೂಲಕ ಮತದಾನಕ್ಕೆ ಟ್ರಂಪ್ ವಿರೋಧ

ಪಿಟಿಐ Updated:

ಅಕ್ಷರ ಗಾತ್ರ : | |

ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ವಿದೇಶಿ ಹಸ್ತಕ್ಷೇಪಕ್ಕಿಂತ, ಅಂಚೆ ಮತದಾನ ಮಾಡುವ ಪ್ರಕ್ರಿಯೆ ಬಹುದೊಡ್ಡ ಬೆದರಿಕೆಯಾಗಿದೆ. ದೊಡ್ಡ ಪ್ರಮಾಣದಲ್ಲಿ ಈ ಪ್ರಕ್ರಿಯೆ ನಡೆಯುವುದರಿಂದ ನಕಲಿ ಮತದಾನಕ್ಕೆ ಅವಕಾಶ ಕಲ್ಪಿಸುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧಪಕ್ಷ ಡೆಮಾಕ್ರಟಿಕ್ ಪಕ್ಷ ಆಡಳಿತವಿರುವ ರಾಜ್ಯಗಳ ರಾಜ್ಯಪಾಲರು ಅಂಚೆ ಮತದಾನ ಮಾಡುವುದನ್ನು ಉತ್ತೇಜಿಸುತ್ತಿದ್ದಾರೆ. ಕೊರೊನಾ ವೈರಸ್‌ ಸೋಂಕು ಹರಡುತ್ತಿರುವ ಈ ಕಾಲದಲ್ಲಿ ಈ ಪ್ರಕ್ರಿಯೆಯೇ ಆದ್ಯತೆಯಾಗಬೇಕು ಎಂದು ಹೇಳಿದ್ದಾರೆ. ಆದರೆ, ಇವರು ಲಕ್ಷಾಂತರ ಮತಪತ್ರಗಳನ್ನೇ ನಿಯಂತ್ರಿಸುತ್ತಾರೆ. ಇದು ಅಧ್ಯಕ್ಷೀಯ ಚುನಾವಣೆಯಲ್ಲಿ ನಮಗೆ ಎದುರಾಗಿರುವ ದೊಡ್ಡ ಆತಂಕ. ಇದು ಚುನಾವಣೆಯಲ್ಲಿ ವಿದೇಶಿಗರ ಹಸ್ತಕ್ಷೇಪಕ್ಕಿಂತ ಬಹಳ ದೊಡ್ಡ ಬೆದರಿಕೆ‘ ಎಂದು ತಿಳಿಸಿದ್ದಾರೆ.

‘ಅಂಚೆ ಮತದಾನ ಮಾಡುವುದರಿಂದ ನಕಲಿ ಮತದಾನಕ್ಕೆ ಅವಕಾಶ ನೀಡಿದಂತಾಗುತ್ತದೆ. ಯಾರದ್ದೋ ಮತವನ್ನು ಅವರ ಪರವಾಗಿ ಮತ್ತೊಬ್ಬರು ಚಲಾಯಿಸುತ್ತಾರೆ. ಸಾವಿರಾರು ಮತಪತ್ರಗಳೂ ನಾಪತ್ತೆಯಾಗುತ್ತವೆ‘ ಎಂದೂ ಹೇಳಿದ್ದಾರೆ.

ಆದರೆ ತಮ್ಮ ವಾದ ಮುಂದುವರಿಸುವ ಡೆಮಾಕ್ರಟಿಕ್ ಪಕ್ಷದವರು, ‘ಅಂಚೆ ಮೂಲಕ ಮತದಾನ ಪ್ರಕ್ರಿಯೆ ಈಗಾಗಲೇ ಮೊದಲಿನಿಂದಲೂ ನಡೆದುಕೊಂಡು ಬಂದಿರುವಂಥದ್ದು. ಕೊರೊನಾ ಸಾಂಕ್ರಾಮಿಕ ರೋಗದ ಭೀತಿಯಿರುವ ಸಂದರ್ಭದಲ್ಲಿ ಈ ರೀತಿಯ ಮತದಾನದ ಪ್ರಕ್ರಿಯೇ ಆದ್ಯತೆಯಾಗಬೇಕು‘ ಎಂದು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು