ಪುಣೆ: ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ (ಐಐಎಸ್ಇಆರ್) ಪ್ರಯೋಗಾಲಯವೊಂದರಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, ಒಬ್ಬ ವಿದ್ಯಾರ್ಥಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಾಹ್ನ 12 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ ಎಂದು ಪುಣೆ ಮಹಾನಗರ ಪಾಲಿಕೆಯ ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಪ್ರಶಾಂತ್ ರಾನ್ಪೈಸ್ ತಿಳಿಸಿದ್ದಾರೆ.

ಸದ್ಯ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

‘ಬೆಂಕಿ ಕಾಣಿಸಿಕೊಂಡಿರುವುದಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ, ಬೆಂಕಿ ನಂದಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ’ ಎಂದು ಐಐಎಸ್ಇಆರ್ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ, ವಿದ್ಯಾರ್ಥಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ... ಭೀಕರ ಪ್ರವಾಹ: ಜರ್ಮನಿಯಲ್ಲಿ 93, ಯುರೋಪ್ನಲ್ಲಿ ಒಟ್ಟು 108 ಮಂದಿ ಸಾವು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.