ಬುಧವಾರ, ಜನವರಿ 27, 2021
16 °C

ರಾಜ್ಯದ ಜನರಿಗೆ ಉಚಿತ ಕೋವಿಡ್‌ ಲಸಿಕೆ ನೀಡಲು ಸಿದ್ಧತೆ: ಮಮತಾ ಬ್ಯಾನರ್ಜಿ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಪಶ್ಚಿಮ ಬಂಗಾಳ ಸರ್ಕಾರವು ರಾಜ್ಯದ ಎಲ್ಲ ಜನರಿಗೆ ಕೋವಿಡ್‌ ಲಸಿಕೆಯನ್ನು ಉಚಿತವಾಗಿ ನೀಡಲು ಸಿದ್ಧತೆಗಳನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಿಳಿಸಿದರು.

ಪೊಲೀಸರು, ಗೃಹರಕ್ಷಕ ದಳದವರು, ಸ್ವಯಂಸೇವಕರು, ವಿಪತ್ತು ನಿರ್ವಹಣಾ ಸಿಬ್ಬಂದಿ– ಇವರಿಗೆ  ಆದ್ಯತೆಯಲ್ಲಿ ಲಸಿಕೆ ನೀಡಲಾಗುವುದು ಎಂದು ಮಮತಾ ಬ್ಯಾನರ್ಜಿ ಅವರು ಆರೋಗ್ಯ ಕಾರ್ಯಕರ್ತರನ್ನು ಉದ್ದೇಶಿಸಿ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಸರ್ಕಾರವು ರಾಜ್ಯದ ಎಲ್ಲ ಜನರಿಗೆ ಕೋವಿಡ್‌ ಲಸಿಕೆಯನ್ನು ಉಚಿತವಾಗಿ ನೀಡಲು ಸಿದ್ಧತೆಗಳನ್ನು ಮಾಡುತ್ತಿದೆ ಎಂದು ಹೇಳಲು ನನಗೆ ಸಂತೋಷವಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು