ಬುಧವಾರ, ಜುಲೈ 6, 2022
22 °C

ಜಿ–23 ನಾಯಕರಿಂದ ಪಕ್ಷ ಒಡೆಯಲು ಯತ್ನ: ಖರ್ಗೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಕಪಿಲ್‌ ಸಿಬಲ್‌ ವಿರುದ್ಧ ಬುಧವಾರ ಹರಿಹಾಯ್ದಿದ್ದಾರೆ.

ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ (ಸಿಡಬ್ಲ್ಯುಸಿ) ಬಳಿಕವೂ ಮೇಲಿಂದ ಮೇಲೆ ಸಭೆಗಳನ್ನು ನಡೆಸುವ ಮೂಲಕ ಜಿ–23 (ಕಾಂಗ್ರೆಸ್ ಭಿನ್ನಮತೀಯರು) ನಾಯಕರು ಕಾಂಗ್ರೆಸ್‌ ಅನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಗುಲಾಮ್‌ ನಬಿ ಆಜಾದ್‌ ಅವರ ನಿವಾಸದಲ್ಲಿ ಸಭೆ ಆಯೋಜಿಸಿದ್ದ ಹಿನ್ನೆಲೆಯಲ್ಲಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಅವರು 100 ಸಭೆಗಳನ್ನು ಆಯೋಜಿಸಿದರೂ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದುರ್ಬಲಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಬೀದಿಗಳಿಂದ ರಾಷ್ಟ್ರ ರಾಜಧಾನಿವರೆಗೆ ಕಾಂಗ್ರೆಸ್‌ ಅವರ ಜೊತೆ ಇದೆ’ ಎಂದು ಅವರು ಹೇಳಿದ್ದಾರೆ.  ‘ಕಪಿಲ್‌ ಸಿಬಲ್‌ ಅವರು ಯಾವ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದಾರೆ?’ ಎಂದು ಸಲ್ಮಾನ್ ಖುರ್ಷಿದ್ ಪ್ರಶ್ನಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು