ಮಂಗಳವಾರ, ಸೆಪ್ಟೆಂಬರ್ 28, 2021
21 °C

ಬೇರೆಯವರನ್ನೇ ‘ಬಲಿ ಕಾ ಬಕ್ರಾ’ ಮಾಡುವ ಪ್ರಧಾನಿ ಮೋದಿ: ಮಲ್ಲಿಕಾರ್ಜುನ ಖರ್ಗೆ ಟೀಕೆ

ಡೆಕ್ಕನ್ ಹೆರಾಲ್ಡ್ Updated:

ಅಕ್ಷರ ಗಾತ್ರ : | |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಯಾವತ್ತೂ ತಮ್ಮ ವಿರುದ್ಧದ ದೂಷಣೆಯನ್ನು ಸ್ವೀಕರಿಸುವುದಿಲ್ಲ. ಬೇರೆಯವರನ್ನು ‘ಬಲಿ ಕಾ ಬಕ್ರಾ’ ಮಾಡುತ್ತಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಲೋಕಸಭೆಯ ಮುಂಗಾರು ಅಧಿವೇಶನದ ರಾಜ್ಯಸಭೆ ಕಲಾಪದಲ್ಲಿ ಮಾತನಾಡಿದ ಅವರು ಕೋವಿಡ್ ಎರಡನೇ ಅಲೆಯ ಸಂದರ್ಭ ಸರ್ಕಾರವು ಜನರ ಬಗ್ಗೆ ಕಾಳಜಿ ವಹಿಸಿಲ್ಲ. ಆಮ್ಲಜನಕದ ಕೊರತೆ, ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ಇರುವ ಸಂದರ್ಭ ಸರ್ಕಾರವು ಗಂಟೆ ಬಡಿಯುವುದರಲ್ಲಿ ಮತ್ತು ದೀಪ ಬೆಳಗುವುದರಲ್ಲಿ ವ್ಯಸ್ತವಾಗಿತ್ತು ಎಂದು ಖರ್ಗೆ ದೂರಿದ್ದಾರೆ.

ಓದಿ: 

‘ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿ ಸೇರಿದಂತೆ ಎಲ್ಲಾ ಕೋವಿಡ್ ಯೋಧರಿಗೆ ನಾನು ಗೌರವ ಸಲ್ಲಿಸುತ್ತೇನೆ. ದೆಹಲಿಯಲ್ಲಿ ಆಮ್ಲಜನಕಕ್ಕಾಗಿ ಅಲೆದಾಡುತ್ತಿದ್ದವರಿಗೆ ನೆರವಾದವರಿಗೂ ವಂದನೆಗಳು. ಪ್ಲಾಸ್ಮಾ ದಾನ ಮಾಡಿದವರಿಗೂ ಕೃತಜ್ಞತೆಗಳು ಎಂದು ಅವರು ಹೇಳಿದ್ದಾರೆ.

ಸರ್ಕಾರವು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಮಾಡಲು ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು