ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ವರದಿಯಾಗಿದೆ.

ಶಶಿ ತರೂರ್ ಎದುರು ದಿಗ್ವಿಜಯ್ ಸಿಂಗ್ ಅವರು ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಲಿದ್ದಾರೆ ಎಂದು ಈ ಹಿಂದೆ ಹೇಳಲಾಗಿತ್ತು. ಈ ಮಧ್ಯೆ, ದಿಗ್ವಿಜಯ್ ಅವರು ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದರ ಬೆನ್ನಲ್ಲೇ, ಅವರು ನಾಮಪತ್ರ ಸಲ್ಲಿಸುವುದಿಲ್ಲ ಎಂದು ವರದಿಯಾಗಿದೆ. ಈ ಕುರಿತು ಅಧಿಕೃತ ಹೇಳಿಕೆ ಇನ್ನಷ್ಟೇ ಪ್ರಕಟವಾಗಬೇಕಿದೆ.

ಅಹಂಕಾರ ಮೊದಲು, ಯುವಕರ ಭವಿಷ್ಯ ನಂತರ ಎಂಬುದು ಬಿಜೆಪಿ ನೀತಿ: ಪ್ರಿಯಾಂಕ್ ಖರ್ಗೆ

ಖರ್ಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ‘ಎಎನ್ಐ’ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.

ನಾಮಪತ್ರ ಸಲ್ಲಿಸಲು ಇಂದು (ಸೆ. 30) ಕೊನೆಯ ದಿನವಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, 19ರಂದು ಫಲಿತಾಂಶ ಪ್ರಕಟವಾಗಲಿದೆ.

ತಿರುವನಂತಪುರ ಕ್ಷೇತ್ರದ ಸಂಸದ ಶಶಿ ತರೂರ್ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಈಗಾಗಲೇ ಘೋಷಿಸಿದ್ದಾರೆ.

ಬಿಜೆಪಿ ಸೇರುವ ಹಾದಿಯಲ್ಲಿ ವಿವಿಧ ಪಕ್ಷಗಳ ಮುಖಂಡರು: ಬಿ.ಎಸ್.ಯಡಿಯೂರಪ್ಪ ಹೇಳಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.