ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭವಾನಿಪುರ ಉಪಚುನಾವಣೆ ಮತ ಎಣಿಕೆ: ದಾಖಲೆ ಅಂತರದ ಗೆಲುವಿನತ್ತ ಮಮತಾ ದಾಪುಗಾಲು

Last Updated 3 ಅಕ್ಟೋಬರ್ 2021, 8:56 IST
ಅಕ್ಷರ ಗಾತ್ರ

ಕೋಲ್ಕತ್ತ: ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ 17ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು 45,738 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ ಹಾಗೂ ದಾಖಲೆಯೊಂದಿಗೆ ಜಯ ಸಾಧಿಸುವ ಹೊಸ್ತಿಲಲ್ಲಿದ್ದಾರೆ.

ಸಾನ್ಸೆರ್‌ಗಂಜ್‌ ಮತ್ತು ಜಂಗಿಪುರ ಕ್ಷೇತ್ರಗಳಲ್ಲೂ ಟಿಎಂಸಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ.

17ನೇ ಸುತ್ತಿನ ಬಳಿಕ ಮಮತಾ ಬ್ಯಾನರ್ಜಿ ಅವರು67,620 ಮತಗಳನ್ನು ಗಳಿಸಿದ್ದರೆ, ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲಾ 21,882 ಮತಗಳನ್ನು ಗಳಿಸಿದ್ದಾರೆ. ಸಿಪಿಎಂನ ಶ್ರೀಜಿಬ್‌ ಬಿಸ್ವಾಸ್ 2,896 ಮತಗಳನ್ನು ಗಳಸಿದ್ದಾರೆ.

ಕಳೆದ ಏಪ್ರಿಲ್‌–ಮೇನಲ್ಲಿ ನಡೆದ ಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿ ಇಲ್ಲಿ ಸುಮಾರು 28,000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT