ಶನಿವಾರ, ಸೆಪ್ಟೆಂಬರ್ 25, 2021
29 °C

ಪ್ರಧಾನಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ: ಪೆಗಾಸಸ್ ತನಿಖೆಗೆ ಆಗ್ರಹ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯ ಲೋಕ ಕಲ್ಯಾಣ್ ಮಾರ್ಗದ ನಿವಾಸ ‘7’ರಲ್ಲಿ ಭೇಟಿಯಾದರು. 

ಆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ‘ಇದೊಂದು ಸೌಹಾರ್ದ ಭೇಟಿ.   ಕೋವಿಡ್‌ಗೆ ಸಂಬಂಧಿಸಿದ ಸಮಸ್ಯೆಗಳು, ಲಸಿಕೆ, ಔಷಧಧ ಅಗತ್ಯತೆ ಕುರಿತು ಪ್ರಸ್ತಾಪಿಸಿದ್ದೇನೆ. ಅಲ್ಲದೆ, ಪಶ್ಚಿಮ ಬಂಗಾಳದ ಹೆಸರನ್ನು ಬದಲಿಸಲು ಸಲ್ಲಿಸಲಾಗಿರುವ ಪ್ರಸ್ತಾವನೆಯನ್ನು ಗಮನಕ್ಕೆ ತಂದಿದ್ದೇನೆ.  ಇವುಗಳತ್ತ ಗಮನಹರಿಸುವುದಾಗಿ ಮೋದಿ ಹೇಳಿದ್ದಾರೆ,’ ಎಂದು ತಿಳಿಸಿದರು. 

‘ಪೆಗಾಸಸ್ ವಿವಾದದ ಕುರಿತು ಪ್ರಧಾನಿ ಸರ್ವಪಕ್ಷ ಸಭೆ ಕರೆಯಬೇಕು. ಈ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ನಡೆಸಬೇಕು,‘ ಎಂದು ಮಮತಾ ಬ್ಯಾನರ್ಜಿ ಆಗ್ರಹಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು