‘ಯಸ್ ಚಂಡಮಾರುತ‘ದಿಂದ 2.21 ಲಕ್ಷ ಹೆಕ್ಟೆರ್ ಬೆಳೆ ಹಾನಿ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಕಳೆದ ವಾರ ಪಶ್ಚಿಮ ಬಂಗಾಳ ರಾಜ್ಯಕ್ಕೆ ಅಪ್ಪಳಿಸಿದ ‘ಯಸ್’ ಚಂಡಮಾರುತದಿಂದಾಗಿ ಒಟ್ಟು ₹20 ಸಾವಿರ ಕೋಟಿಗಳಷ್ಟು ನಷ್ಟವಾಗಿದ್ದು, 2.21 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಚಂಡಮಾರುತದಿಂದಾಗಿ 2 ಲಕ್ಷಕ್ಕೂ ಹೆಚ್ಚು ಜನರು ನಿರ್ವಸಿತರಾಗಿದ್ದಾರೆ. ನಿರಾಶ್ರಿತರಿಗಾಗಿ ರಾಜ್ಯ ಸರ್ಕಾರ ಸುಮಾರು 1,200 ಪರಿಹಾರ ಕೇಂದ್ರಗಳನ್ನು ತೆರೆದಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಚಂಡಮಾರುತದಿಂದ ಉಂಟಾಗಿರುವ ಹಾನಿ ಕುರಿತು ಮಮತಾ ಅವರು ಮೇ 28ರಂದು ಪ್ರಧಾನಿಯವರಿಗೆ ವರದಿ ಸಲ್ಲಿಸಿದ್ದು, ಹಾನಿಗೊಳಗಾದ ಪ್ರದೇಶಗಳ ಪುನರ್ ಅಭಿವೃದ್ಧಿಗಾಗಿ ₹20 ಸಾವಿರ ಕೋಟಿ ನೀಡಬೇಕೆಂದು ಮನವಿ ಮಾಡಿದ್ದಾರೆ.
ಬಂಗಾಳ-ಕೇಂದ್ರ ತಿಕ್ಕಾಟ: ಮುಖ್ಯ ಕಾರ್ಯದರ್ಶಿಗೆ ಸಲಹೆಗಾರ ಹುದ್ದೆ ಕೊಟ್ಟ ದೀದಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.