ಸೋಮವಾರ, ಅಕ್ಟೋಬರ್ 18, 2021
22 °C

ಭಾರತವನ್ನು 'ತಾಲಿಬಾನಿ ಬಿಜೆಪಿ' ಆಳಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

PTI

ಕೋಲ್ಕತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯನ್ನು ಅಫ್ಗಾನಿಸ್ತಾನವನ್ನು ಆಕ್ರಮಿಸಿಕೊಂಡು ಆಡಳಿತ ನಡೆಸುತ್ತಿರುವ ತಾಲಿಬಾನ್‌ಗೆ ಹೋಲಿಸಿದ್ದಾರೆ.

ನಮ್ಮ ಸ್ವಾತಂತ್ರ್ಯವನ್ನು ನಾವು ಕಾಪಾಡಿಕೊಳ್ಳಬೇಕಿದೆ. 'ತಾಲಿಬಾನಿ ಬಿಜೆಪಿ' ಭಾರತವನ್ನು ಆಳಲು ಸಾಧ್ಯವಿಲ್ಲ. ಬಿಜೆಪಿಯನ್ನು ಸೋಲಿಸಲು ತೃಣಮೂಲ ಕಾಂಗ್ರೆಸ್‌ ಒಂದೇ ಸಾಕು ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಷೇಕ್ಸ್‌ಪಿಯರ್‌ ಸಾರಣೀಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಟಿಎಂಸಿ ನಾಯಕಿ ಮಮತಾ, 'ಖೇಲಾ' ಭವಾನಿಪುರದಿಂದ ಆರಂಭಗೊಳ್ಳಲಿದೆ ಮತ್ತು ಸಂಪೂರ್ಣ ರಾಷ್ಟ್ರದಲ್ಲಿ ಜಯ ಗಳಿಸುವ ಮೂಲಕ ಅಂತಿಮಗೊಳ್ಳಲಿದೆ ಎಂದು ಹೇಳಿದ್ದಾರೆ.

'ರೋಮ್‌ನಲ್ಲಿ ವಿಶ್ವ ಶಾಂತಿಯ ಕುರಿತು ಒಂದು ಸಭೆ ಇತ್ತು. ಅಲ್ಲಿಗೆ ನನ್ನನ್ನು ಆಹ್ವಾನಿಸಲಾಯಿತು. ಜರ್ಮನ್ ಚಾನ್ಸಲರ್‌, ಪೋಪ್ (ಫ್ರಾನ್ಸಿಸ್) ಕೂಡ ಭಾಗವಹಿಸಲಿದ್ದಾರೆ. ನನಗೆ ಹಾಜರಾಗಲು ಇಟಲಿ ವಿಶೇಷ ಅನುಮತಿ ನೀಡಿತ್ತು. ಆದರೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದೆ' ಎಂದು ಮಮತಾ ಆರೋಪಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಮುಂದುವರಿಯಲು ಭವಾನಿಪುರ ಉಪ-ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಜಯಗಳಿಸಬೇಕಿದೆ. ಸೆಪ್ಟೆಂಬರ್‌ 30ಕ್ಕೆ ಚುನಾವಣೆ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು