ಬುಧವಾರ, ಜನವರಿ 19, 2022
26 °C

ಸಂಸತ್‌ ಚಳಿಗಾಲದ ಅಧಿವೇಶನ: ಪ್ರತಿಪಕ್ಷಗಳ ನಾಯಕರನ್ನು ಭೇಟಿಯಾಗಲಿರುವ ಮಮತಾ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಸಂಸತ್‌ನ ಚಳಿಗಾಲದ ಅಧಿವೇಶನ ನವೆಂಬರ್ 29ರಿಂದ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ನಾಯಕರ ಜತೆ ಚರ್ಚಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ನವೆಂಬರ್ 22ರಿಂದ 25ರ ವರೆಗೆ ದೆಹಲಿ ಭೇಟಿ ಹಮ್ಮಿಕೊಂಡಿದ್ದಾರೆ.

ಚಳಿಗಾಲದ ಅಧಿವೇಶನಕ್ಕೆ ಕಾರ್ಯತಂತ್ರಗಳನ್ನು ರೂಪಿಸುವ ಬಗ್ಗೆ ಮಮತಾ ಅವರು ಪ್ರತಿಪಕ್ಷಗಳ ನಾಯಕರ ಜತೆ ಚರ್ಚಿಸಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಎನ್‌ಡಿಟಿವಿ’ ವರದಿ ಮಾಡಿದೆ.

ಕೃಷಿ ಕಾಯ್ದೆಗಳನ್ನು ರದ್ದು ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿರುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅವರು ಚರ್ಚಿಸಲಿದ್ದಾರೆ.

ಓದಿ: 

ಕೃಷಿ ಕಾಯ್ದೆಗಳ ರದ್ದತಿ ನಿರ್ಧಾರವು ರೈತರ ಹೋರಾಟಕ್ಕೆ ಸಂದ ಜಯ ಎಂದು ಟ್ವಿಟರ್‌ನಲ್ಲಿ ಬಣ್ಣಿಸಿದ್ದ ಮಮತಾ, ‘ಬಿಜೆಪಿಯು ನಿಮ್ಮನ್ನು (ರೈತರನ್ನು ಉಲ್ಲೇಖಿಸಿ) ಕ್ರೌರ್ಯದಿಂದ ನಡೆಸಿಕೊಂಡರೂ ಹೆದರದೆ ಅವಿರತ ಹೋರಾಟ ನಡೆಸಿದ ಪ್ರತಿಯೊಬ್ಬ ರೈತನಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇದು ನಿಮ್ಮ ಗೆಲುವು. ಈ ಹೋರಾಟದಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು’ ಎಂದು ಉಲ್ಲೇಖಿಸಿದ್ದರು.

ಪ್ರತಿಪಕ್ಷಗಳ ನಾಯಕರನ್ನು ಮಾತ್ರವಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಮಮತಾ ಭೇಟಿಯಾಗಲಿದ್ದಾರೆ ಎನ್ನಲಾಗಿದೆ. ಬಿಎಸ್‌ಎಫ್ ಕಾರ್ಯಾಚರಣೆ ವ್ಯಾಪ್ತಿ ವಿಸ್ತರಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅವರು ಪ್ರಧಾನಿ ಜತೆ ಚರ್ಚಿಸುವ ನಿರೀಕ್ಷೆ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು