ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಬಂಗಾಳ ಭೇಟಿ ದಿನವೇ ಬೃಹತ್‌ ಹೋರಾಟ ಹಮ್ಮಿಕೊಂಡ ದೀದಿ

Last Updated 7 ಮಾರ್ಚ್ 2021, 5:44 IST
ಅಕ್ಷರ ಗಾತ್ರ

ಕೋಲ್ಕತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಭಾನುವಾರ ಪಶ್ಚಿಮ ಬಂಗಾಳಕ್ಕೆ ತೆರಳುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬೆಲೆ ಏರಿಕೆ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಕೋಲ್ಕತಾದಲ್ಲಿ ಮೊದಲ ರ‍್ಯಾಲಿ

ಪ್ರಧಾನಿ ಮೋದಿ ಕೋಲ್ಕತಾದಲ್ಲಿ ನಡೆಸುತ್ತಿರುವ ಮೊದಲ ರ‍್ಯಾಲಿ ಇದಾಗಿದೆ. ಮೈದಾನ್ ಪ್ರದೇಶದ ಬ್ರಿಗೇಡ್ ಪರೇಡ್ ಗ್ರೌಂಡ್ಸ್‌ನಲ್ಲಿ ಮೋದಿ ರ‍್ಯಾಲಿ ನಡೆಸಲು ಉದ್ದೇಶಿಸಿದ್ದಾರೆ. ಅದರಲ್ಲಿ ಅಧಿಕ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಸಿಲಿಗುರಿಯಲ್ಲಿ ದೀದಿ ರ‍್ಯಾಲಿ

ಮಮತಾ ಬ್ಯಾನರ್ಜಿ ಎಲ್‌ಪಿಜಿ ಬೆಲೆ ಏರಿಕೆ ವಿರುದ್ಧ ಸಿಲಿಗುರಿಯಲ್ಲಿ ಪಾದಯಾತ್ರೆಯಲ್ಲಿ ಸಾಗಿ ಬೃಹತ್ ರ‍್ಯಾಲಿ ನಡೆಸಲು ಮುಂದಾಗಿದ್ದಾರೆ. ಈ ರ‍್ಯಾಲಿಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಕೊಳ್ಳಲಿದ್ದಾರೆ.

ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆಯಿಂದ ಜನಸಾಮಾನ್ಯರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಅಲ್ಲದೆ, ಬೆಲೆ ಏರಿಕೆಯನ್ನು ವಿರೋಧಿಸುವ ಉದ್ದೇಶದಿಂದ ಖಾಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ರ‍್ಯಾಲಿಯಲ್ಲಿ ಪ್ರದರ್ಶಿಸಲಾಗುವುದು ಎಂದು ಮಮತಾ ಹೇಳಿದ್ದಾರೆ.

ಈ ಮೊದಲು ಮಮತಾ ಬ್ಯಾನರ್ಜಿ ಬೈಕ್ ರ‍್ಯಾಲಿ ನಡೆಸಿ, ಇಂಧನ ಬೆಲೆ ಏರಿಕೆ ವಿರುದ್ಧ ಹೋರಾಟ ನಡೆಸಿದ್ದರು. ಈ ಬಾರಿ ಎಲ್‌ಪಿಜಿ ಬೆಲೆ ಏರಿಕೆ ವಿರೋಧಿಸಿ ಪಾದಯಾತ್ರೆ ನಡೆಸುವ ಮೂಲಕ ಪ್ರಧಾನಿ ಕೋಲ್ಕತಾ ಭೇಟಿ ನೀಡುತ್ತಿರುವ ದಿನವೇ ಪ್ರತಿಭಟನೆ ಕೈಗೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT