ಶನಿವಾರ, ನವೆಂಬರ್ 26, 2022
22 °C

ಜಿ20 ಶೃಂಗಸಭೆ ಸಿದ್ಧತೆ ಸಭೆಗೆ ಪ್ರಧಾನಿ ಕರೆ: ದೆಹಲಿಗೆ ಭೇಟಿ ನೀಡಲಿದ್ದಾರೆ ಮಮತಾ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಮುಂದಿನ ವರ್ಷ (2023) ಸೆಪ್ಟೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯ ಸಿದ್ಧತೆ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆದಿರುವ ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ.

ಡಿಸೆಂಬರ್‌ 5ರಂದು ದೆಹಲಿಯಲ್ಲಿ ಸಭೆ ನಡೆಯಲಿದೆ. ಈ ಸಂಬಂಧ ವಿಧಾನಸಭೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಮಮತಾ, ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ಅಧ್ಯಕ್ಷರಾಗಿ ಸಭೆಗೆ ಭಾಗವಹಿಸುತ್ತೇನೆಯೇ ಹೊರತು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಅಲ್ಲ ಎಂದು ತಿಳಿಸಿದ್ದಾರೆ.

'ಡಿಸೆಂಬರ್‌ 5ರಂದು ನಡೆಯುವ ಮೋದಿ ಅವರ ಸಭೆಯಲ್ಲಿ ಭಾಗವಹಿಸಲು ನವದೆಹಲಿಗೆ ಪ್ರಯಾಣ ಬೆಳಸಲಿದ್ದೇನೆ' ಎಂದಿದ್ದಾರೆ.

2023ರ ಜಿ20 ಸಮ್ಮೇಳನದ ಆತಿಥ್ಯವನ್ನು ಭಾರತ ವಹಿಸಿಕೊಳ್ಳಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು