ಕೋಲ್ಕತ್ತ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಮಂಗಳವಾರ ಸುಶ್ಮಿತಾ ದೇವ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.
'ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆ ಹಾಗೂ ಮಹಿಳಾ ಸಬಲೀಕರಣದ ಸಂಬಂಧ ಮಮತಾ ಬ್ಯಾನರ್ಜಿ ಅವರ ದೂರದೃಷ್ಟಿತ್ವದಿಂದಾಗಿ ನಮ್ಮ ಸಮಾಜವು ಮತ್ತಷ್ಟು ಸಾಧಿಸಲು ಸಾಧ್ಯವಾಗಲಿದೆ' ಎಂದು ಟಿಎಂಸಿ ಟ್ವೀಟಿಸಿದೆ.
ಸುಶ್ಮಿತಾ ದೇವ್ ಕಳೆದ ತಿಂಗಳಷ್ಟೇ ಕಾಂಗ್ರೆಸ್ ತೊರೆದು ಟಿಎಂಸಿಗೆ ಸೇರ್ಪಡೆಯಾದರು. ಅವರು ಕಾಂಗ್ರೆಸ್‌ನ ರಾಷ್ಟ್ರೀಯ ವಕ್ತಾರರಲ್ಲಿ ಒಬ್ಬರಾಗಿ ಕಾರ್ಯನಿರ್ವಹಿಸುತ್ತಿದ್ದರು ಹಾಗೂ ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆಯಾಗಿದ್ದರು.
ಮಮತಾ ಬ್ಯಾನರ್ಜಿ ಅವರಿಗೆ ಧನ್ಯವಾದ ತಿಳಿಸಿರುವ ಸುಶ್ಮಿತಾ, 'ಸಂಸತ್ತಿನಲ್ಲಿ ಹೆಚ್ಚು ಮಹಿಳೆಯರನ್ನು ಕಾಣಬೇಕೆಂಬ ಅವರ ನಿರ್ಧಾರವು ಅಸಾಧಾರಣವಾದುದು. ನಾನು ನನ್ನಿಂದಾಗುವ ಅತ್ಯುತ್ತಮವಾದುದನ್ನು ಮಾಡುವೆ' ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.
ಆಗಸ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಅವರ ತಂಡಕ್ಕೆ ಸೇರ್ಪಡೆಯಾದ ಬಳಿಕ ಸುಶ್ಮಿತಾ ಅವರಿಗೆ ಅಸ್ಸಾಂ ಮತ್ತು ತ್ರಿಪುರಾದಲ್ಲಿ ಟಿಎಂಸಿ ಕಾರ್ಯಾಚರಣೆಯನ್ನು ಗಮನಿಸುವ ಹೊಣೆ ನೀಡಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.