ಮಂಗಳವಾರ, ಮೇ 18, 2021
22 °C
ಪಶ್ಚಿಮ ಬಂಗಾಳದ ಜನತೆ ದೀದಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ: ಕೈಲಾಶ್‌ ವಿಜಯವರ್ಗಿಯಾ

ಟಿಎಂಸಿ ಜಯಭೇರಿಗೆ ಮಮತಾ ಕಾರಣ: ಬಿಜೆಪಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಂದಾಗಿಯೇ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಜಯಭೇರಿ ಬಾರಿಸಿತು ಎಂದು ಬಿಜೆಪಿ ಹೇಳಿದೆ.

‘ರಾಜ್ಯದಲ್ಲಿ ಪಕ್ಷವು ಸೋಲಲು ಏನು ಕಾರಣಗಳು ಎನ್ನುವ ಬಗ್ಗೆ ಆತ್ಮವಿಮರ್ಶೆ ಮಾಡಲಾಗುವುದು’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯವರ್ಗಿಯಾ ತಿಳಿಸಿದ್ದಾರೆ.

’ಪಶ್ಚಿಮ ಬಂಗಾಳದ ಜನತೆ ದೀದಿ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ನಮ್ಮ ಪಕ್ಷಕ್ಕೆ ಯಾವ ಕಾರಣಗಳಿಂದ ಹಿನ್ನಡೆಯಾಯಿತು ಎನ್ನುವ ಬಗ್ಗೆ ವಿಶ್ಲೇಷಣೆ ನಡೆಸಲಾಗುವುದು. ಸಂಘಟನೆಯ ವಿಷಯ, ಹೊರಗಿನವರು–ಒಳಗಿನವರಬಹುದು ಅಥವಾ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಇರಬಹುದು. ಸಮಗ್ರವಾಗಿ ಪಕ್ಷದ ವೇದಿಕೆಯಲ್ಲಿ ಚರ್ಚಿಸಲಾಗುವುದು’ ಎಂದು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು