ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ತಾರತಮ್ಯ ನೀತಿ ವಿರುದ್ಧ ಮಮತಾ ಬ್ಯಾನರ್ಜಿ ಅಹೋರಾತ್ರಿ ಧರಣಿ 

Last Updated 30 ಮಾರ್ಚ್ 2023, 14:34 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರವು ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಎರಡು ದಿನಗಳ ಕಾಲ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

ನಗರದ ಕೇಂದ್ರ ಭಾಗದಲ್ಲಿರುವ ಬಿ.ಆರ್. ಅಂಬೇಡ್ಕರ್ ಪ್ರತಿಮೆಯ ಎದುರು ಬುಧವಾರ ಮಧ್ಯಾಹ್ನದಿಂದ ಮಮತಾ ಹಾಗೂ ಟಿಎಂಸಿ(ತೃಣಮೂಲ ಕಾಂಗ್ರೆಸ್) ಪಕ್ಷದ ನಾಯಕರು ಧರಣಿ ಆರಂಭಿಸಿದ್ದು, ತಾರತಮ್ಯ ಧೋರಣೆಯ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಎಲ್ಲಾ ಪಕ್ಷಗಳು ಒಗ್ಗಟ್ಟಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಕರೆಕೊಟ್ಟಿದ್ದಾರೆ. ಈ ಸಂದರ್ಭ ಕಾಂಗ್ರೆಸ್ ಮತ್ತು ಬಲಪಂಥೀಯ ಪಕ್ಷಗಳಿಂದ ಟಿಎಂಸಿಯು ಅಂತರ ಕಾಪಾಡಿಕೊಳ್ಳುವ ನಿಲುವಿನಲ್ಲಿ ಬದಲಾವಣೆಯಿಲ್ಲ ಎಂದೂ ತಿಳಿಸಿದ್ದಾರೆ.

ಗುರುವಾರ ಸಂಜೆ ಈ ಅಹೋರಾತ್ರಿ ಧರಣಿ ಮುಕ್ತಾಯಗೊಳ್ಳಲಿರುವ ಮೂಲಕ ಬಂಗಾಳದಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಬಿಸಿ ಏರಲಾರಂಭಿಸಿದೆ.

ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಸುವೇಂದು ಅಧಿಕಾರಿ ರಾಜ್ಯ ಸರ್ಕಾರದ ವಿರುದ್ಧ ಹಲವು ಪ್ರತಿಭಟನೆಗಳನ್ನೂ ಕೈಗೊಂಡಿದ್ದಾರೆ. ಈ ಮೂಲಕ ಬಂಗಾಳದಲ್ಲಿ ರ್‍ಯಾಲಿ ಮೇಲಾಟಗಳು ಶುರುವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT