ಭಾನುವಾರ, ಸೆಪ್ಟೆಂಬರ್ 19, 2021
27 °C

ಭವಾನಿಪುರ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲ್ಕತ್ತ:  ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭವಾನಿಪುರ ವಿಧಾನಸಭಾ ಉಪಚುನಾವಣೆಗೆ ಶುಕ್ರವಾರ ನಾಮಪತ್ರ ಸಲ್ಲಿಸಿದರು. 

ಈ ಕ್ಷೇತ್ರದಲ್ಲಿ ಟಿಎಂಸಿ ವರಿಷ್ಠೆ ಮಮತಾ ಅವರ ವಿರುದ್ಧ ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್ ಮತ್ತು ಎಡರಂಗದ ಶ್ರೀಜಿಬ್ ಬಿಸ್ವಾಸ್ ಸ್ಪರ್ಧಿಸುತ್ತಿದ್ದಾರೆ. 

ಸೆ. 30ರಂದು ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.  ಅಕ್ಟೋಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.

ವಿಧಾನಸಭಾ ಚುನಾವಣೆ ವೇಳೆ ನಂದಿಗ್ರಾಮ ಕ್ಷೇತ್ರದಲ್ಲಿ ಬಿಜೆಪಿಯ ಸುವೇಂದು ಅಧಿಕಾರಿ ಅವರ ವಿರುದ್ಧ ಸ್ಪರ್ಧಿಸಿದ್ದ ಮಮತಾ, ಚುನಾವಣೆಯಲ್ಲಿ ಸೋತ ಹೊರತಾಗಿಯೂ  ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಿಎಂ ಸ್ಥಾನ ಉಳಿಸಿಕೊಳ್ಳಬೇಕಿದ್ದರೆ, ಅವರು ವಿಧಾನಸಭೆ ಸದಸ್ಯರಾಗಲೇಬೇಕಾಗಿದ್ದು, ಈ ಉಪಚುನಾವಣೆಯಲ್ಲಿ ಗೆಲ್ಲಬೇಕಾ ಪರಿಸ್ಥಿತಿ ಇದೆ. 
ಬ್ಯಾನರ್ಜಿ ಅವರು ಭವಾನಿಪುರದ ನಿವಾಸಿಯೂ ಹೌದು. 2011 ಮತ್ತು 2016 ರಲ್ಲಿ ಅವರು ಎರಡು ಬಾರಿ ಈ ಕ್ಷೇತ್ರದಿಂದ ಗೆದ್ದಿದ್ದರು.

ಭವಾನಿಪುರದಿಂದ ಗೆದ್ದಿರುವ ಟಿಎಂಸಿ ಶಾಸಕ ಸೋಮದೇವ್‌ ಚಟ್ಟೋಪಾಧ್ಯಾಯ ಅವರು ಮಮತಾ ಅವರಿಗೆ ಅನುಕೂಲವಾಗಲೆಂದೇ ಕ್ಷೇತ್ರವನ್ನು ತೊರೆದು, ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು