ಬುಧವಾರ, ಜೂನ್ 23, 2021
29 °C

ಭವಾನಿಪುರ ವಿಧಾನಸಭಾ ಕ್ಷೇತ್ರದಿಂದ ಮಮತಾ ಬ್ಯಾನರ್ಜಿ ಸ್ಪರ್ಧೆ ಸಾಧ್ಯತೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ‘ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಭವಾನಿಪುರ ವಿಧಾನಸಭಾ ಕ್ಷೇತ್ರದಿಂದ ಉಪ‍ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಭವಾನಿಪುರ ಶಾಸಕ ಶೋಭನ್‌ದೇವ್‌ ಚಟ್ಟೋಪಾಧ್ಯಾಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ’ ಎಂದು ಟಿಎಂಸಿ ಮೂಲಗಳು ಹೇಳಿವೆ.

ಈ ಬಾರಿಯ ವಿಧಾನಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದರು. ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರಿಯ ಬೇಕಾದರೆ, ಆರು ತಿಂಗಳೊಳಗೆ ಅವರು ವಿಧಾನಸಭೆಗೆ ಮರು ಆಯ್ಕೆಯಾಗಬೇಕು. ಈ ಹಿನ್ನೆಲೆಯಲ್ಲಿ ಶೋಭನ್‌ದೇವ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಲಿದ್ದಾರೆ.

‘ಈ ಬಗ್ಗೆ ಪ್ರತಿಕ್ರಿಯಿಸಿದ ಚಟ್ಟೋಪಾಧ್ಯಾಯ ಅವರು,‘ ಇದು ಪಕ್ಷದ ನಿರ್ಧಾರವಾಗಿದೆ. ನಾನು ಅದನ್ನು ಸಂತಸದಿಂದ ಪಾಲಿಸುತ್ತೇನೆ. ಭವಾನಿಪುರ ಕ್ಷೇತ್ರದ ಶಾಸಕ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲಿದ್ದೇನೆ’ ಎಂದು ಅವರು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು