ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೈಲ ಬೆಲೆ ಏರಿಕೆ ವಿರುದ್ಧ ಮಮತಾ ಬ್ಯಾನರ್ಜಿ ಪ್ರತಿಭಟಿಸಿದ್ದು ಹೀಗೆ...!

Last Updated 25 ಫೆಬ್ರುವರಿ 2021, 12:59 IST
ಅಕ್ಷರ ಗಾತ್ರ

ಕೊಲ್ಕತ್ತಾ: ತೈಲ ಬೆಲೆ ಏರಿಕೆ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನೆಡೆಸಿದ್ದಾರೆ. ಎಲೆಕ್ಟ್ರಿಕ್‌ ಸ್ಕೂಟರ್‌ನ ಹಿಂಬದಿಯಲ್ಲಿ ಕುಳಿತು ಪ್ರಯಾಣಿಸಿ ಅವರು ಗಮನಸೆಳೆದಿದ್ದಾರೆ.

ಕೊಲ್ಕತ್ತಾ ಮೇಯರ್‌ ಫರೀದ್‌ ಹಕೀಮ್‌ ಅವರು ಚಲಾಯಿಸುತ್ತಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ನ ಹಿಂಬದಿ ಕುಳಿತು, ಬೆಲೆ ಏರಿಕೆ ವಿರೋಧಿ ಫಲಕ ಹಿಡಿದು ನಬಣ್ಣ (ಸರ್ಕಾರದ ಕಾರ್ಯಾಲಯ)ಕ್ಕೆ ಆಗಮಿಸಿದ ಮಮತಾ ಬ್ಯಾನರ್ಜಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸರಿ ಸುಮಾರು ಐದು ಕಿ.ಮೀ ದೂರ ಅವರು ಹೀಗೆ ಪ್ರಯಾಣಿಸಿದ್ದು, ರಸ್ತೆಯಲ್ಲಿ ಜನರಿಗೆ ಕೈಬೀಸಿದರು.

ತೈಲ ಬೆಲೆ ಕೆಲವು ರಾಜ್ಯಗಳಲ್ಲಿ ನೂರರ ಗಡಿ ದಾಟಿದೆ. ಬೆಲೆ ಏರಿಕೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳವು ಈಗಾಗಲೇ ಪೆಟ್ರೋಲ್‌ ಮತ್ತು ಡಿಸೇಲ್‌ ಮೇಲಿನ ವ್ಯಾಟ್‌ ಅನ್ನು ₹1 ಇಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT