ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭವಾನಿಪುರ ಉಪಚುನಾವಣೆ ಫಲಿತಾಂಶ: 31 ಸಾವಿರ ಮತಗಳ ಅಂತರ ಕಾಪಾಡಿಕೊಂಡ ಮಮತಾ

Last Updated 3 ಅಕ್ಟೋಬರ್ 2021, 8:30 IST
ಅಕ್ಷರ ಗಾತ್ರ

ಕೋಲ್ಕತ್ತ: ಭವಾನಿಪುರ ಉಪಚುನಾವಣೆಯ ಮತ ಎಣಿಕೆಯಲ್ಲಿ ಹತ್ತನೇ ಸುತ್ತು ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು 31,645 ಮತಗಳ ಅಂತರದೊಂದಿಗೆ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮುರ್ಶಿದಾಬಾದ್‌ನ ಸಮ್ಸೆರ್‌ಗಂಜ್‌ ಮತ್ತು ಜಂಗಿಪುರ ಕ್ಷೇತ್ರಗಳಲ್ಲೂ ಟಿಎಂಸಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ಹತ್ತನೇ ಸುತ್ತಿನ ಮತ ಎಣಿಕೆಯ ಬಳಿಕ ಮಮತಾ ಬ್ಯಾನರ್ಜಿ ಅವರು42,122 ಮತಗಳನ್ನು ಗಳಿಸಿದರೆ, ಅವರ ಸಮೀಪದ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲಾ ಅವರು10,477 ಮತಗಳನ್ನು ಗಳಿಸಿದರು. ಸಿಪಿಎಂನ ಶ್ರೀಜಿಬ್‌ ಬಿಸ್ವಾಸ್‌ 1,234 ಮತಗಳನ್ನು ಗಳಿಸಿದರು.

ಒಟ್ಟು 21 ಸುತ್ತುಗಳ ಮತ ಎಣಿಕೆ ನಡೆಯಲಿದೆ.‌

ಸಮ್ಸೆರ್‌ಗಂಜ್‌ನಲ್ಲಿ ಟಿಎಂಸಿ ಅಭ್ಯರ್ಥಿ ಅಮಿರುಲ್ ಇಸ್ಲಾಂ ಅವರು 5ನೇ ಸುತ್ತಿನ ಮತ ಎಣಿಕೆಯ ಬಳಿಕ3,768 ಮತಗಳ ಅಂತರ ಗಳಿಸಿಕೊಂಡರೆ, ಜಂಗಿಪುರದಲ್ಲಿ ಝಕೀರ್ ಹುಸೇನ್‌ ಅವರು ಎರಡನೇ ಸುತ್ತಿನ ಮತ ಎಣಿಕೆ ಬಳಿಕ 15,643 ಮತಗಳಿಂದ ಮುಂದಿದ್ದಾರೆ.

ಟಿಎಂಸಿ ಕಾರ್ಯಕರ್ತರ ಸಂಭ್ರಮ: ಮಮತಾ ಬ್ಯಾನರ್ಜಿ ಅವರು ಭಾರಿ ಮುನ್ನಡೆ ಗಳಿಸುತ್ತಿರುವಂತೆಯೇ ಟಿಎಂಸಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆಮಾಡಿದ್ದು, ಬಿಜೆಪಿ ಮತ್ತು ಸಿಪಿಎಂ ಕಚೇರಿಗಳು ಬಿಕೋ ಎನ್ನುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT