ಮಂಗಳವಾರ, ಮೇ 18, 2021
28 °C

ಸೋತ ಆಟಗಾರನಂತಾಗಿದೆ ಮಮತಾ ಬ್ಯಾನರ್ಜಿ ಪರಿಸ್ಥಿತಿ: ಜೆ.ಪಿ.ನಡ್ಡಾ

ಪಿಟಿಐ‌ Updated:

ಅಕ್ಷರ ಗಾತ್ರ : | |

BJP president J P Nadda and Chief Minister Mamata Banerjee. Credit: AFP/PTI Photo

ಕೋಲ್ಕತ್ತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪರಿಸ್ಥಿತಿ ಸೋತ ಆಟಗಾರನಂತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಟಿಎಂಸಿಯ ಧ್ಯೇಯವಾಕ್ಯವನ್ನು (ಆಟ ಶುರು/ಖೇಲಾ ಹೋಬೆ) ಉದ್ದೇಶಿಸಿ ಅವರು ವ್ಯಂಗ್ಯವಾಡಿದ್ದಾರೆ.

ಬರ್ಧಮಾನ್ ಜಿಲ್ಲೆಯ ಪುರ್ಬಾದ ಕಲ್‌ನಾದಲ್ಲಿ ರೋಡ್‌ ಶೋ ನಡೆಸಿ ಮಾತನಾಡಿದ ಅವರು, ಬಿಜೆಪಿ ಮತ್ತು ಚುನಾವಣಾ ಆಯೋಗದತ್ತ ಬೆರಳು ತೋರಿಸುತ್ತಿರುವ ಮಮತಾ ತಾನು ರಾಜ್ಯದ ಜನರಿಗೆ ಏನು ಮಾಡಿದ್ದೇನೆ ಎಂಬುದನ್ನು ಮರೆತಂತಿದೆ ಟೀಕಿಸಿದ್ದಾರೆ.

‘ಆಟದಲ್ಲಿ ಸೋತ ಆಟಗಾರನಂತಿದೆ ಮಮತಾ ಅವರ ಪರಿಸ್ಥಿತಿ. ಅವರು ರಾಜ್ಯದ ಜನರಿಗೆ ಅನೇಕ ವರ್ಷಗಳಿಂದ ಅನ್ಯಾಯವೆಸಗುತ್ತಾ ಬಂದಿದ್ದಾರೆ. ಆದರೆ ಅಧಿಕಾರ ನೀಡಿದರೆ ಬಿಜೆಪಿ ಅಭಿವೃದ್ಧಿಗೆ ಒತ್ತು ನೀಡಲಿದೆ. ಮಹಿಳೆಯರ ಮೇಲಿನ ದೌರ್ಜನ್ಯ ನಿಲ್ಲಿಸಲು ಮತ್ತು ಯುವಕರಿಗಾಗಿ ಉದ್ಯೋಗ ಸೃಷ್ಟಿಸಲು ಆದ್ಯತೆ ನೀಡಲಿದೆ’ ಎಂದು ನಡ್ಡಾ ಹೇಳಿದ್ದಾರೆ.

ಓದಿ: 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು