ಸೋಮವಾರ, ನವೆಂಬರ್ 28, 2022
20 °C

ಮದುವೆಯಾಗಲು ನಿರಾಕರಿಸಿದ ಯುವತಿ ಹತ್ಯೆ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಮತಾಂತರ ಮತ್ತು ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಸೂಫಿಯಾನ್‌ನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಂಧನಕ್ಕೂ ಮುನ್ನ ನಡೆದ ಎನ್‌ಕೌಂಟರ್‌ನಲ್ಲಿ ಆತನ ಕಾಲಿಗೆ ಗುಂಡೇಟು ತಗುಲಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಪಕ್ಕದ ಮನೆಯ ಯುವತಿಗೆ ಬಲವಂತವಾಗಿ ಮದುವೆ ಹಾಗೂ ಮತಾಂತರವಾಗಲು ಸೂಫಿಯಾನ್‌ ಒತ್ತಾಯಿಸಿದ್ದು, ಯುವತಿ ನಿರಾಕರಿಸಿದಾಗ ನಾಲ್ಕನೇ ಮಹಡಿಯಿಂದ ತಳ್ಳಿ ಹತ್ಯೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿತ್ತು.

ಲಖನೌನ ದುಬಗ್ಗಾ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಎನ್‌ಕೌಂಟರ್‌ನಲ್ಲಿ ಆತನ ಬಲ ಪಾದಕ್ಕೆ ಗುಂಡೇಟು ತಗುಲಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ದುಬಗ್ಗಾ ಪೊಲೀಸ್‌ ಠಾಣಾಧಿಕಾರಿ ಸುಖ್‌ವೀರ್‌ ಸಿಂಗ್‌ ಭದೌರಿಯಾ ತಿಳಿಸಿದ್ದಾರೆ.

ಆರೋಪಿ ಸೂಫಿಯಾಸ್‌ ಬಂಧನಕ್ಕೆ ಸುಳಿವು ನೀಡಿದವರಿಗೆ ₹25,000 ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು.

ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 302 (ಕೊಲೆ) ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಅಲ್ಲದೆ ಮತಾಂತರ ನಿಷೇಧ ಕಾಯ್ದೆ ಅಡಿ ದೂರು ದಾಖಲಾಗಿದೆ.   

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು