ಹೈದರಾಬಾದ್: ವಿಮಾನದಲ್ಲಿ ಬಾಂಬ್ ಇದೆ ಎಂದು ಹುಸಿ ಬಾಂಬ್ ಕರೆ ಮಾಡಿದ ವ್ಯಕ್ತಿಯನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್ ಏರ್‌ಪೋರ್ಟ್‌ನಲ್ಲಿ ಸೋಮವಾರ ಈ ಘಟನೆ ನಡೆದಿದೆ. ಹೈದರಾಬಾದ್‌ನಿಂದ ಚೆನ್ನೈಗೆ ಹೊರಡಲು ಅಣಿಯಾಗುತ್ತಿದ್ದ ವಿಮಾನಲ್ಲಿ ಬಾಂಬ್ ಇದೆ ಎಂದು ಆರೋಪಿ ಕರೆ ಮಾಡಿ ಹೇಳಿದ್ದ.
ಬಾಂಬ್ ಕರೆ ಬರುತ್ತಿದ್ದಂತೆಯೇ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಇಳಿಸಿ, ತನಿಖೆ ನಡೆಸಲಾಗಿತ್ತು.
ಹುಸಿ ಬಾಂಬ್ ಕರೆ ಮಾಡಿದ ವ್ಯಕ್ತಿ ಇದೇ ವಿಮಾನದಲ್ಲಿ ಪ್ರಯಾಣಿಸಬೇಕಿತ್ತು. ಆದರೆ ತಡವಾಗಿ ಬಂದಿದ್ದರಿಂದ ವಿಮಾನ ಹತ್ತಲು ಅಧಿಕಾರಿಗಳು ಅನುಮತಿ ನೀಡಿರಲಿಲ್ಲ. ಹೀಗಾಗಿ ಹುಸಿ ಬಾಂಬ್ ಕರೆ ಮಾಡಿದೆ ಎಂದು ವಿಚಾರಣೆ ವೇಳೆ ಹೇಳಿದ್ದಾನೆ.
ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು, ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.