ಮಂಗಳವಾರ, ಅಕ್ಟೋಬರ್ 26, 2021
20 °C

ರಾಜಸ್ಥಾನ: ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಟಾ (ರಾಜಸ್ಥಾನ): ಬುಂಡಿಯ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಪತ್ರ ಬರೆದಿದ್ದ ಆರೋಪದ ಮೇಲೆ 50 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ತ್ರಿಲೋಕಚಂದ್ ಶರ್ಮಾ ಬಂಧಿತ ಆರೋಪಿ. ಆತನ ವಿರುದ್ಧ ‘ನೆಗೋಷಿಯಬಲ್‌ ಇನ್‌ಸ್ಟ್ರುಮೆಂಟ್‌ ಕಾಯ್ದೆ’ಯ ಅಡಿ ಪ್ರಕರಣ ದಾಖಲಾಗಿ, ವಿಚಾರಣೆ ನಡೆಯುತ್ತಿತ್ತು. ಆದೇಶ ತನ್ನ ವಿರುದ್ಧ ಬರಬಹುದು ಎಂಬ ಭಯದಲ್ಲಿ ಆತ ನ್ಯಾಯಾಧೀಶರಿಗೆ ಅನಾಮಧೇಯ ಪತ್ರ ಬರೆದಿದ್ದ. ಪತ್ರದಲ್ಲಿ ನ್ಯಾಯಾಧೀಶರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ.

ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾದ ದೃಶ್ಯಗಳು ಹಾಗೂ ಇತರ ಪುರಾವೆಗಳ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಬುಂಡಿ ನಗರ ಠಾಣೆಯ ಸರ್ಕಲ್‌ ಇನ್‌ಸ್ಪೆಕ್ಟರ್‌ ಸಹದೇವ್‌ ಮೀನಾ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು