ಸೋಮವಾರ, ಆಗಸ್ಟ್ 15, 2022
22 °C

ಶಿವಸೇನಾ ಮುಖ್ಯಸ್ಥರಿಗೆ ಬೆದರಿಕೆ; ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತಾ: ಬಾಲಿವುಡ್ ನಟಿ ಕಂಗನಾ ರನೌತ್‌ ಅವರ ಅಭಿಮಾನಿ ಎಂದು ಹೇಳಿಕೊಂಡು, ಸಾಮಾಜಿಕ ಜಾಲತಾಣಗಳಲ್ಲಿ ಶಿವಸೇನಾ ಮುಖ್ಯಸ್ಥ ಸಂಜಯ್ ರಾವುತ್ ಅವರಿಗೆ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಇಲ್ಲಿನ ಟೊಲ್ಲಿಗುಂಜೆ ಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನ ಹೆಸರು ಪಾಲಾಶ್ ಘೋಷ್ (24). ಕೋಲ್ಕತ್ತಾ ಪೊಲೀಸರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿದ ಮುಂಬೈ ಪೊಲೀಸರು, ಕೋಲ್ಕತ್ತಾದ ಟೊಲ್ಲಿಗುಂಜೆ ಪ್ರದೇಶದಲ್ಲಿರುವ ಅವರ ಮನೆಯಲ್ಲೇ ಘೋಷ್‌ನನ್ನು ಬಂಧಿಸಿದ್ದಾರೆ.

ಬಂಧಿತ ಘೋಷ್, ರಾವುತ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ‘ಪರಿಣಾಮ ನೆಟ್ಟಗಿರುವುದಿಲ್ಲ‘ ಎಂದು ಬೆದರಿಕೆ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ‘ಬಂಧಿತನನ್ನು ಪೊಲೀಸರು ಮುಂಬೈ  ನಗರದ ನ್ಯಾಯಾಲಯದಲ್ಲಿ ಹಾಜರುಪಡಿಸಲಿದ್ದಾರೆ‘ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು