ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಪು ಕೋಟೆ ಹಿಂಸಾಚಾರ: ಆರೋಪಿ ಗುರ್ಜೋತ್‌ ಸಿಂಗ್‌ ಬಂಧನ

Last Updated 28 ಜೂನ್ 2021, 6:51 IST
ಅಕ್ಷರ ಗಾತ್ರ

ನವದೆಹಲಿ: ‘ಕೆಂಪು ಕೋಟೆ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ ಮೂಲದ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರ ವಿಶೇಷ ವಿಭಾಗವು ಬಂಧಿಸಿದೆ’ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದರು.

‘ಆರೋಪಿಯನ್ನು ಗುರ್ಜೋತ್‌ ಸಿಂಗ್‌ ಎಂದು ಗುರುತಿಸಲಾಗಿದ್ದು, ಈತನನ್ನು ಅಮೃತಸರದಲ್ಲಿ ಬಂಧಿಸಲಾಗಿದೆ. ಗುರ್ಜೋತ್‌ ಸಿಂಗ್‌ ಪತ್ತೆಗಾಗಿ ಇಲಾಖೆಯು ₹1 ಲಕ್ಷ ನಗದು ಬಹುಮಾನ ಘೋಷಿಸಿತ್ತು’ ಎಂದು ಪೊಲೀಸ್‌ ಉಪ ಆಯುಕ್ತ(ವಿಶೇಷ ವಿಭಾಗ) ಸಂಜೀವ್‌ ಕುಮಾರ್‌ ಯಾದವ್‌ ಮಾಹಿತಿ ನೀಡಿದರು.

ಜನವರಿ 26, ಗಣರಾಜ್ಯೋತ್ಸವ ದಿನದಂದು ಸಾವಿರಾರು ರೈತರು ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಟ್ಯ್ರಾಕ್ಟರ್‌ ರ‍್ಯಾಲಿ ನಡೆಸಿದ್ದರು. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ಘರ್ಷಣೆ ಸಂಭವಿಸಿತ್ತು. ಆಗ ಕೆಲವು ಪ್ರತಿಭಟನಕಾರರು ಕೆಂಪು ಕೋಟೆ ಮೇಲೆ ಹತ್ತಿ ಧರ್ಮ ಸೂಚಕ ಧ್ವಜವನ್ನು ಹಾರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT