ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ: 5 ತಿಂಗಳ ಮಗುವಿನ ಕೈ, ಕಾಲು ಮುರಿದು ಕೊಲ್ಲಲು ಯತ್ನಿಸಿದ್ದ ವ್ಯಕ್ತಿ ಬಂಧನ

Last Updated 6 ಮಾರ್ಚ್ 2023, 3:17 IST
ಅಕ್ಷರ ಗಾತ್ರ

ಗುವಾಹಟಿ : ಪತ್ನಿಯೊಂದಿಗೆ ಜಗಳ ಮಾಡಿಕೊಂಡು ತನ್ನ 5 ತಿಂಗಳ ಮಗುವಿನ ಕೈ, ಕಾಲು ಮುರಿದು, ಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.


ಅಸ್ಸಾಂನ ಗುವಾಹಟಿಯಲ್ಲಿ 35 ವರ್ಷದ ವ್ಯಕ್ತಿಯೊಬ್ಬನನ್ನು ತನ್ನ ಪತ್ನಿಯೊಂದಿಗೆ ಜಗಳವಾಡಿಕೊಂಡು 5 ತಿಂಗಳ ಮಗುವನ್ನು ಕೊಲ್ಲಲು ಯತ್ನಿಸಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ವ್ಯಕ್ತಿ ಗುವಾಹಟಿ ನಗರದ ಕಹಿಲಿಪಾರಾ ಪ್ರದೇಶದಲ್ಲಿನ ಕೂಲಿ ಕಾರ್ಮಿಕ. ಸ್ಥಳೀಯ ನಿವಾಸಿಗಳ ಮಾಹಿತಿ ಮೇರೆಗೆ ವ್ಯಕ್ತಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ಗುವಾಹಟಿ ಪೂರ್ವ ಜಿಲ್ಲೆಯ ಉಪ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

‘ಶನಿವಾರ ಪತ್ನಿಯೊಂದಿಗೆ ಜಗಳವಾಡಿದ ನಂತರ ವ್ಯಕ್ತಿ ತನ್ನ ಮಗುವಿನ ಮೇಲೆ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ತಾಯಿ ಮತ್ತು ಶಿಶು ಇಬ್ಬರೂ ಗಾಯಗೊಂಡಿದ್ದು, ಇಲ್ಲಿನ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಜಿಎಂಸಿಎಚ್) ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಡಿಸಿಪಿ ತಿಳಿಸಿದ್ದಾರೆ.

ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅವರು ಹೇಳಿದರು.‌

ಮಗುವಿಗೆ ಕೆಲವು ಶಸ್ತ್ರಚಿಕಿತ್ಸೆಗಳು ನಡೆದಿದ್ದು, ತಾಯಿ ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT