ಶುಕ್ರವಾರ, ಮಾರ್ಚ್ 24, 2023
28 °C

ಪ್ರಧಾನಿ ಮೋದಿ ವಿರುದ್ಧ ದ್ವೇಷ ಸಂದೇಶ: ವ್ಯಕ್ತಿಯ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಭುವನೇಶ್ವರ: ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿರುದ್ಧ ದ್ವೇಷ ಸಂದೇಶಗಳನ್ನು ಪೋಸ್ಟ್‌ ಮಾಡಿದ ಆರೋಪದಡಿ 42 ವರ್ಷದ ವ್ಯಕ್ತಿಯೊಬ್ಬನನ್ನು ಒಡಿಶಾದ ಕಟಕ್‌ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶ ಪೊಲೀಸರು ಕುಸುಂಬಿ ಗ್ರಾಮದಲ್ಲಿ ಆರೋಪಿಯನ್ನು ಗುರುವಾರ ಬಂಧಿಸಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ಉತ್ತರ ಪ್ರದೇಶ ಪೊಲೀಸ್‌ ಮತ್ತು ಒಡಿಶಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ’ ಎಂದು ಒಡಿಶಾದ ಪೊಲೀಸ್‌ ವರಿಷ್ಠಾಧಿಕಾರಿ ಜುಗಲ್‌‌ ಕಿಶೋರ್‌ ಬನೋಟ್‌ ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು