ಶುಕ್ರವಾರ, ಅಕ್ಟೋಬರ್ 2, 2020
24 °C

ಗುಂಪು ಥಳಿತ: ಉತ್ತರ ಪ್ರದೇಶದಲ್ಲಿ ಪರಿಶಿಷ್ಟ ಜಾತಿಯ ವ್ಯಕ್ತಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ತನ್ನ 16 ವರ್ಷದ ಮಗಳನ್ನು ಮಾರಾಟ ಮಾಡಲು ಮುಂದಾಗಿದ್ದಾನೆ ಎಂಬ ಆರೋಪದಡಿ ವ್ಯಕ್ತಿಯೊಬ್ಬನನ್ನು ಕೆಲವರು ಹಿಗ್ಗಾಮುಗ್ಗ ಥಳಿಸಿದ ಪರಿಣಾಮ ಆತ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ನಡೆದಿದೆ.

ಸುರ್ವೇಶ್ ಕುಮಾರ್‌ ದಿವಾಕರ್‌(45) ಎಂಬ ದಲಿತ ವ್ಯಕ್ತಿಯ ಮೇಲೆ ಐದು ಮಂದಿಯ ಗುಂಪೊಂದು ಭಾನುವಾರ  ದಾಳಿ ನಡೆಸಿದ್ದು, ಆತನನ್ನು ದೊಣ್ಣೆ ಮತ್ತು ಕಬ್ಬಿಣದ ಸರಳಿನಿಂದ ಮನಬಂದಂತೆ ಥಳಿಸಿತು. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಅವರು ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ. ಈ ಪ್ರಕರಣ ಸಂಬಂಧ ನಾಲ್ಕು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೊಬ್ಬನಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದರು.

ಬಿಜೆಪಿ ಸರ್ಕಾರವು ದಲಿತ ವ್ಯಕ್ತಿಗೆ ನ್ಯಾಯವನ್ನು ಒದಗಿಸಬೇಕು ಎಂದು ವಿಪಕ್ಷಗಳಾದ ಸಮಾಜವಾದಿ ಪಕ್ಷ ಮತ್ತು ಬಿಎಸ್‌ಪಿ ಆಗ್ರಹಿಸಿದೆ.

‘ಬಿಜೆಪಿ ಆಡಳಿತದಲ್ಲಿ ದಲಿತ ಜನಾಂಗಕ್ಕೆ ವ್ಯಕ್ತಿಯನ್ನು ಬಜರಂಗದಳದ ಗೂಂಡಾಗಳು ಥಳಿಸಿದ್ದಾರೆ. ಇದು ನಿಜಕ್ಕೂ ದುರದೃಷ್ಟಕರ. ಸಮಾಜವಾದಿ ಪಕ್ಷದಿಂದ ಸರ್ವೇಶ್‌ ಕುಟುಂಬದವರಿಗೆ ₹1 ಲಕ್ಷ ಸಹಾಯಧನ ನೀಡಲಿದ್ದೇವೆ. ಸರ್ಕಾರ ಕೂಡ ಅವರ ಕುಟುಂಬಕ್ಕೆ ₹10 ಲಕ್ಷ ಪರಿಹಾರ ಧನ ಘೋಷಿಸಬೇಕು’ ಎಂದು ಸಮಾಜವಾದಿ ಪಕ್ಷ ಒತ್ತಾಯಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು