ಶುಕ್ರವಾರ, ಮೇ 20, 2022
25 °C

ಸ್ವರ್ಣ ಮಂದಿರ ಅಪವಿತ್ರಗೊಳಿಸಿದ ಆರೋಪ: ಉದ್ರಿಕ್ತ ಗುಂಪಿನಿಂದ ವ್ಯಕ್ತಿಯ ಕೊಲೆ

ಪಿಟಿಐ Updated:

ಅಕ್ಷರ ಗಾತ್ರ : | |

ಚಂಡೀಗಡ: ಅಮೃತಸರದ ಸ್ವರ್ಣ ಮಂದಿರ ಅಪವಿತ್ರಗೊಳಿಸಲು ಯತ್ನಿಸಿದ ಆರೋಪದಲ್ಲಿ ಕೋಪೋದ್ರಿಕ್ತ ಗುಂಪು ಓರ್ವ ವ್ಯಕ್ತಿಯನ್ನು ಹೊಡೆದು ಕೊಂದಿರುವ ಘಟನೆ ವರದಿಯಾಗಿದೆ.

ಶನಿವಾರ ಸಂಜೆ ಪ್ರಾರ್ಥನೆಯ ಸಂದರ್ಭದಲ್ಲಿ ಗರ್ಭಗುಡಿಯೊಳಗೆ ಜಿಗಿದ ವ್ಯಕ್ತಿ ಖಡ್ಗವನ್ನು ಹಿಡಿದು ಸಿಖ್ ಧರ್ಮಗುರುಗಳು ಗುರು ಗ್ರಂಥ ಸಾಹೀಬ್ (ಸಿಖ್ ಧರ್ಮದ ಪವಿತ್ರ ಗ್ರಂಥ) ಪಠಿಸುತ್ತಿದ್ದ ಸ್ಥಳದ ಸಮೀಪಕ್ಕೆ ತಲುಪಿದ್ದರು.

ಈ ವೇಳೆ ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ (ಎಸ್‌ಜಿಪಿಸಿ) ಕಾರ್ಯಪಡೆಯ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಕೋಪೋದ್ರಿಕ್ತ ಗುಂಪು ಕೊಠಡಿಗೆ ಕರೆದೊಯ್ದು ಹಿಗ್ಗಾಮುಗ್ಗ ಥಳಿಸಿದ ಪರಿಣಾಮ ಆತ ಮೃತಪಟ್ಟಿದ್ದಾನೆ. ಘಟನೆಯ ವಿಡಿಯೊ ಕೂಡ ವೈರಲ್ ಆಗಿದೆ.

 

 

 

ಉತ್ತರ ಪ್ರದೇಶದ ಮೂಲದ ವ್ಯಕ್ತಿ ಸಾವಿಗೀಡಾಗಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ ಪಿ.ಎಸ್. ಭಂಡಾಲ್ ತಿಳಿಸಿದ್ದಾರೆ. ಎಲ್ಲ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದ್ದು, ನಿಗೂಢ ಉದ್ದೇಶ ಇಟ್ಟುಕೊಂಡಿದ್ದಾರೆಯೇ ಎಂಬುದನ್ನು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಸ್ವರ್ಣ ಮಂದಿರದ ಘಟನೆ ದುರದೃಷ್ಟಕರ ಎಂದು ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಪ್ರತಿಕ್ರಿಯಿಸಿದ್ದು, ತನಿಖೆಗೆ ಆದೇಶಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು