ಥಾಣೆ: ಇಲ್ಲಿನ ಭಿವಂಡಿ ನಿವಾಸಿಯೊಬ್ಬರು ತಮ್ಮ ಪತ್ನಿಗೆ ‘ತ್ರಿವಳಿ ತಲಾಖ್’ ನೀಡಿದ್ದಕ್ಕಾಗಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರೇಯಸಿಯೊಂದಿಗೆ ವಾಸವಾಗಿರುವ ಪತಿಯನ್ನು ತನ್ನೊಂದಿಗೆ ಬರುವಂತೆ ಪತ್ನಿ ಮನವಿ ಮಾಡಿದ್ದಾರೆ. ಈ ವೇಳೆ ಆಕೆಯ ಪತಿ ‘ತಲಾಖ್ ತಲಾಖ್ ತಲಾಖ್’ ಎಂದೂ ಕೂಗಿ ಹೇಳಿ, ಮದುವೆ ಮುರಿದುಕೊಂಡಿರುವುದಾಗಿ ಹೇಳಿದ್ದಾನೆ’ಎಂದು ದೂರಿನಲ್ಲಿ ಸಂತ್ರಸ್ತೆ ಉಲ್ಲೇಖಿಸಿದ್ದಾರೆ.
ಫೆಬ್ರುವರಿ 26ರಂದು ಈ ಘಟನೆ ನಡೆದಿದ್ದು, ತಡವಾಗಿ ಬಯಲಾಗಿದೆ.
ಭಾರತೀಯ ದಂಡ ಸಂಹಿತೆ ಮತ್ತು ಮುಸ್ಲಿಂ ಮಹಿಳೆಯರ (ವಿವಾಹ ಹಕ್ಕುಗಳ ರಕ್ಷಣೆ) ಕಾಯ್ದೆಯಡಿ ಪತಿ ಮತ್ತು ಆತನ ಪ್ರೇಯಸಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಆಗಸ್ಟ್ 1ರಂದು ತ್ರಿವಳಿ ತಲಾಖ್ ಕ್ರಿಮಿನಲ್ ಅಪರಾಧ ಎಂದು ಘೋಷಿಸುವ ಕಾಯ್ದೆಗೆ ಸಂಸತ್ತು ಅಂಗೀಕಾರ ನೀಡಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.