ಸೋಮವಾರ, ಡಿಸೆಂಬರ್ 5, 2022
23 °C

ಹೃದಯ ವಿದ್ರಾವಕ ಘಟನೆ: ಮಗನ ಸಾವಿನ ಸುದ್ದಿ ಕೇಳಿ, ತಂದೆಯೂ ನಿಧನ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಪಾಲ್ಘರ್: ಮಹಾರಾಷ್ಟ್ರ ರಾಜ್ಯದಲ್ಲಿ ಗರ್ಬಾ ನೃತ್ಯ ಮಾಡುತ್ತಿರುವಾಗಲೇ ಯುವಕ ಮೃತಪಟ್ಟಿದ್ದಾನೆ. ಈ ಸುದ್ದಿ ಕೇಳಿ ಯುವಕನ ತಂದೆಯು ಸಾವನ್ನಪ್ಪಿರುವ ಘಟನೆ ನಡೆದಿದೆ.

ಪಾಲ್ಘರ್ ಜಿಲ್ಲೆಯ ವಿರಾರ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ ಎಂದು ಮಹಾರಾಷ್ಟ್ರ ಪೊಲೀಸರು ಹೇಳಿದ್ದಾರೆ. 

ಇಲ್ಲಿನ ಗ್ಲೋಬಲ್ ಸಿಟಿ ಕಾಂಪ್ಲೆಕ್ಸ್‌ನಲ್ಲಿ ಭಾನುವಾರ ರಾತ್ರಿ ಗರ್ಬಾ ನೃತ್ಯ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. 35 ವರ್ಷದ ಮನೀಷ್‌ ಸೋನಿಗ್ರಾ ಎಂಬ ಯುವಕ ಕೂಡ ಗರ್ಬಾ ನೃತ್ಯ ಮಾಡುತ್ತಿದ್ದರು. ನೃತ್ಯ ಮಾಡುವಾಗಲೇ ಮನೀಷ್‌ ಕುಸಿದು ಬಿದ್ದು ಮೃತಪಟ್ಟಿದ್ದರು. 

ಮಗನ ಸಾವಿನ ಸುದ್ದಿ ಕೇಳಿ, ತಂದೆ ನಾರಾಪ್ಜಿ ಸೋನಿಗ್ರಾ ಆಘಾತಗೊಂಡು ತೀವ್ರ ಅಸ್ವಸ್ಥರಾಗಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮೃತಪಟ್ಟರು. ಅವರಿಗೆ 66 ವರ್ಷ ವಯಸ್ಸಾಗಿತ್ತು. ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಂದೆ, ಮಗನ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ಅವರ ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ. ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಗರ್ಬಾ ನೃತ್ಯ ಮಾಡುವಾಗ ಮೃತಪಟ್ಟ ಯುವಕ ( ಇದು ಮತ್ತೊಂದು ಪ್ರಕರಣದ ವಿಡಿಯೊ)

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು