ಗುರುವಾರ , ಜುಲೈ 7, 2022
23 °C

ಕೋಲ್ಕತ್ತ: ಕೋವಿಡ್ ವೈದ್ಯಕೀಯ ಸಂಶೋಧನೆಗಾಗಿ ದೇಹದಾನ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಪ್ರಾಯಶಃ ದೇಶದಲ್ಲೇ ಮೊದಲ ಘಟನೆ ಎಂಬಂತೆ ಪಶ್ಚಿಮ ಬಂಗಾಳದ ಕ್ಯಾನ್ಸರ್ ರೋಗಿಯೊಬ್ಬರು ತಮ್ಮ ಸಾವಿಗೂ ಮೊದಲು ಕೋವಿಡ್ ಸಾಂಕ್ರಾಮಿಕ ರೋಗದ ವೈದ್ಯಕೀಯ ಸಂಶೋಧನೆಗಾಗಿ ದೇಹದಾನ ಮಾಡಿದ್ದಾರೆ.

ಸಾಯುವ ಮೊದಲು ರೋಗಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಬಳಿಕ ವೈದ್ಯಕೀಯ ಸಂಶೋಧನೆಗಾಗಿ ದೇಹವನ್ನು ದಾನ ಮಾಡಲು ನಿರ್ಧರಿಸಿದ್ದರು.

ಇದನ್ನೂ ಓದಿ: 

ಕೋಲ್ಕತ್ತದ ನ್ಯೂ ಟೌನ್ ಪ್ರದೇಶದ 89 ವರ್ಷದ ನಿವಾಸಿ ನಿರ್ಮಲ್ ದಾಸ್ ಎಂಬವರು ಸ್ವಯಂ ಪ್ರೇರಿತವಾಗಿ ದೇಹದಾನ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಿರ್ಮಲ್ ದಾಸ್ ಅವರ ದೇಹವನ್ನು ಶನಿವಾರ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ವಿಧಿವಿಜ್ಞಾನ ವಿಭಾಗಕ್ಕೆ ದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು