ಗುರುವಾರ , ಅಕ್ಟೋಬರ್ 21, 2021
29 °C

4 ಮಕ್ಕಳಿಗೆ ವಿಷವುಣಿಸಿ ನೀರಿನ ಟ್ಯಾಂಕ್‌ಗೆ ಎಸೆದು ಆತ್ಮಹತ್ಯೆಗೆ ಯತ್ನಿಸಿದ ತಂದೆ!

ಪಿಟಿಐ Updated:

ಅಕ್ಷರ ಗಾತ್ರ : | |

ಬಾರ್ಮರ್ (ರಾಜಸ್ಥಾನ): 30 ವರ್ಷದ ವ್ಯಕ್ತಿಯೊಬ್ಬ ಶನಿವಾರ ತನ್ನ ನಾಲ್ಕು ಅಪ್ರಾಪ್ತ ಹೆಣ್ಣು ಮಕ್ಕಳನ್ನು ನೀರಿನ ತೊಟ್ಟಿಗೆ ಎಸೆದು ತಾನು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಶಾಲಾ ಗ್ರಾಮದಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಪುರ್ಖಾ ರಾಮ್ ಎಂಬುವವರು ತನ್ನ ಪುತ್ರಿಯರಾದ ಜಿಯೊ (9), ನೊಜಿ (ಏಳು), ಹೀನಾ (ಮೂರು) ಮತ್ತು ಒಂದೂವರೆ ವರ್ಷದ ಲಾಸಿಗೆ ವಿಷ ಪ್ರಾಶನ ಮಾಡಿಸಿದ್ದಾರೆ.

ಬಳಿಕ ಅವರನ್ನು ತನ್ನ ಮನೆಯ ಹೊರಗಿನ 13 ಅಡಿ ಆಳದ ನೀರಿನ ತೊಟ್ಟಿಯಲ್ಲಿ ಎಸೆದಿದ್ದಾರೆ ಮತ್ತು ತಾನು ಕೂಡ ಅದರೊಳಗೆ ಧುಮುಕಿದ್ದಾರೆ ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಓಂಪ್ರಕಾಶ್ ತಿಳಿಸಿದ್ದಾರೆ.

ಆತ ನೀರಿನ ತೊಟ್ಟಿಗೆ ಜಿಗಿಯುತ್ತಿರುವುದನ್ನು ಕಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

'ನಾಲ್ವರು ಮಕ್ಕಳು ನೀರಿನ ತೊಟ್ಟಿಯಲ್ಲಿ ಮುಳುಗಿದ್ದಾರೆ. ಅವರ ಮೃತದೇಹಗಳನ್ನು ಹತ್ತಿರದ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಯಿತು. ಪುರ್ಖಾ ರಾಮ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಶವಗಳನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ' ಎಂದು ಅವರು ಹೇಳಿದರು.

ಐದು ತಿಂಗಳ ಹಿಂದಷ್ಟೇ ಕೋವಿಡ್‌ನಿಂದ ಪತ್ನಿ ಮೃತಪಟ್ಟಿದ್ದರಿಂದಾಗಿ ಅವರು ನೊಂದಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಹೀಗಾಗಿ ಆತ ತನ್ನ ಮಕ್ಕಳಿಗೆ ತಾಯಿಯಾಗಬಹುದೆಂದು ಹೆಂಡತಿಯ ತಂಗಿಯನ್ನು ಮದುವೆಯಾಗಲು ಬಯಸಿದ್ದರು. ಆದರೆ, ಆಕೆ ಒಪ್ಪಿರಲಿಲ್ಲ ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು