ಗುರುವಾರ , ಮಾರ್ಚ್ 23, 2023
21 °C

ಪಾಕಿಸ್ತಾನ ಗೆದ್ದಿದ್ದಕ್ಕೆ ಸಂಭ್ರಮ, ಭಾರತದ ಗೇಲಿ: ಪತ್ನಿ ವಿರುದ್ಧ ಪತಿ ‌ದೂರು

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ರಾಂಪುರ (ಉತ್ತರ ಪ್ರದೇಶ): ಟಿ20 ಪಂದ್ಯದಲ್ಲಿ ಭಾರತ ವಿರುದ್ಧದ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರು ಪತ್ನಿ ಮತ್ತು ಅತ್ತೆಯ ವಿರುದ್ಧ ದೂರು ದಾಖಲಿಸಿದ್ದಾರೆ.

ರಾಂಪುರದ ಅಜೀಮ್ ನಗರದ ನಿವಾಸಿ ಇಶಾನ್ ಮಿಯಾ ದೂರು ದಾಖಲಿಸಿರುವ ವ್ಯಕ್ತಿ.

‘‘ಭಾರತ ಕ್ರಿಕೆಟ್ ತಂಡವನ್ನು ಗೇಲಿ ಮಾಡಿದ ಪ್ರಸಂಗ ನಮ್ಮ ಗಮನಕ್ಕೆ ಬಂದಿದೆ. ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ,’ ಎಂದು ಪೊಲೀಸ್ ಅಧೀಕ್ಷಕ ಅಂಕಿತ್ ಮಿತ್ತಲ್ ತಿಳಿಸಿದ್ದಾರೆ.

ಭಾರತವು ಪಾಕಿಸ್ತಾನದ ವಿರುದ್ಧ ಸೋತ ನಂತರ ಪತ್ನಿ ರಬಿಯಾ ಶಮ್ಸಿ ಮತ್ತು ಆಕೆಯ ಕುಟುಂಬಸ್ಥರು ಪಟಾಕಿ ಸಿಡಿಸಿ, ವಾಟ್ಸಾಪ್ ಸ್ಟೇಟಸ್ ಹಾಕಿ ಸಂಭ್ರಮಿಸಿದ್ದಾರೆ ಎಂದು ಇಶಾನ್ ಮಿಯಾ ಆರೋಪಿಸಿದ್ದಾರೆ.

ರಾಂಪುರ ಜಿಲ್ಲೆಯ ಗಂಜ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153-ಎ ಮತ್ತು ಮಾಹಿತಿ ತಂತ್ರಜ್ಞಾನ (ತಿದ್ದುಪಡಿ) ಕಾಯಿದೆ, 2008 ರ ಸೆಕ್ಷನ್ 67 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

‘ಮದುವೆಯಾದ ಕೆಲವೇ ದಿನಗಳಲ್ಲಿ ಪತಿ-ಪತ್ನಿ ಪ್ರತ್ಯೇಕಗೊಂಡಿದ್ದಾರೆ. ಪತ್ನಿ ಆಕೆಯ ಕುಟುಂಬದವರು ಇಶಾನ್‌ ಮಿಯಾ ವಿರುದ್ಧ ವರದಕ್ಷಿಣೆ ಪ್ರಕರಣ ದಾಖಲಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಟಿ20 ವಿಶ್ವಕಪ್‌ ಕ್ರೀಡಾಕೂಟದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಅಕ್ಟೋಬರ್‌ 24ರಂದು ಕ್ರಿಕೆಟ್‌ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಭಾರತವು ಪಾಕಿಸ್ತಾನದ ಎದುರು ಸೋಲುಂಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು