ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ಉದ್ದೇಶದಿಂದ ವಿದ್ಯಾರ್ಥಿನಿಯ ದುಪಟ್ಟ ಎಳೆದವನಿಗೆ 3 ವರ್ಷ ಜೈಲು

Last Updated 12 ಅಕ್ಟೋಬರ್ 2022, 15:00 IST
ಅಕ್ಷರ ಗಾತ್ರ

ಮುಂಬೈ: ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ದುಪಟ್ಟವನ್ನು ಲೈಂಗಿಕ ಉದ್ದೇಶದಿಂದ ಎಳೆದ 20 ವರ್ಷದ ಯುವಕನಿಗೆ ಇಲ್ಲಿನ ವಿಶೇಷ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಈ ರೀತಿಯ ಘಟನೆಗಳು ವಿದ್ಯಾರ್ಥಿನಿ ಮತ್ತು ಅವರ ಕುಟುಂಬ ಸದಸ್ಯರಲ್ಲಿ ಭಯವನ್ನು ಸೃಷ್ಟಿಸುತ್ತವೆ ಎಂದು ನ್ಯಾಯಾಲಯ ಹೇಳಿದೆ.

ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 354 ( ಹಲ್ಲೆ ಮತ್ತು ಮಹಿಳೆಯ ಘನತೆ ಹಾಳುಮಾಡುವ ಉದ್ದೇಶದಿಂದ ಕೃತ್ಯ), 506 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆ(ಪೊಸ್ಕೊ)ಅಡಿಯಲ್ಲಿ ಯುವಕ ತಪ್ಪಿತಸ್ಥನೆಂದು ಸಾಬೀತಾಗಿರುವುದಾಗಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಪ್ರಿಯಾ ಬಣಕಾರ್ ತೀರ್ಪು ನೀಡಿದ್ದಾರೆ.

2017ರಲ್ಲಿ ಮುಂಬೈನ್ ಸಬರ್ಬನ್‌ನಲ್ಲಿ ಘಟನೆ ನಡೆದಿದ್ದು, ಸಂತ್ರಸ್ತೆಗೆ 15 ವರ್ಷ ವಯಸ್ಸಾಗಿತ್ತು ಮತ್ತು 10 ನೇ ತರಗತಿಯಲ್ಲಿ ಓದುತ್ತಿದ್ದಳು ಎಂದು ಪ್ರಾಸಿಕ್ಯೂಷನ್ ತಿಳಿಸಿದೆ.

ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ ಎಂದು ಹೇಳಿದ ನ್ಯಾಯಾಧೀಶರು, ಇಂತಹ ಘಟನೆಗಳು ಸಂತ್ರಸ್ತ ಬಾಲಕಿ ಮತ್ತು ಆಕೆಯ ಕುಟುಂಬದ ಸದಸ್ಯರ ಮೇಲೆ ಹಾಗೂ ಸಮಾಜದ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತಿವೆ ಎಂದು ಹೇಳಿದರು.

‘ಇಂತಹ ಘಟನೆಯು ಖಂಡಿತವಾಗಿಯೂ ಸಂತ್ರಸ್ತೆ ಮತ್ತು ಅವರ ಕುಟುಂಬ ಸದಸ್ಯರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡುತ್ತವೆ. ದೀರ್ಘಕಾಲದ ನೋವಿಗೆ ಕಾರಣವಾಗುತ್ತದೆ’ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT