ಆ್ಯಪ್ ಮೂಲಕ ದಿಢೀರ್ ಸಾಲ ಪಾವತಿ
ಆ್ಯಪ್ ಮೂಲಕ ಸಾಲ: ನಾಲ್ವರ ಬಂಧನ
ಚೆನ್ನೈ: ಆ್ಯಪ್‌ಗಳ ಮೂಲಕ ದಿಢೀರ್ ಸಾಲ ನೀಡುವ ವ್ಯವಹಾರ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿ ಇಬ್ಬರು ಚೀನಿಯರು ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆಯ ಪ್ರಾಥಮಿಕ ಮಾಹಿತಿ ಪ್ರಕಾರ, ಮುಖ್ಯ ಆರೋಪಿ ಚೀನಾದಲ್ಲಿ ಉಳಿದುಕೊಂಡು ಈ ವಹಿವಾಟು ನಿರ್ವಹಣೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರು ಭಾರತೀಯರು ಬೆಂಗಳೂರಿನಲ್ಲಿ ಕುಳಿತು ಕಾಲ್‌ಸೆಂಟರ್ ನಡೆಸುತ್ತಿದ್ದರು. ಕ್ಷಿಪ್ರವಾಗಿ ಆನ್‌ಲೈನ್‌ನಲ್ಲಿ ಸಾಲ ನೀಡಲು ಸುಮಾರು 100 ಜನರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದರು. ಪ್ರತಿ ಸಿಬ್ಬಂದಿ ವಾರಕ್ಕೆ ಕನಿಷ್ಠ 10 ಜನರಿಗೆ ಸಾಲ ನೀಡಬೇಕು. ಇಲ್ಲದಿದ್ದರೆ ಕೆಲಸದಿಂದ ತೆಗೆಯಲಾಗುವುದು ಎಂದು ಷರತ್ತು ವಿಧಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.