ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ; ಆರೋಪಿ ಬಂಧನ

Last Updated 22 ಡಿಸೆಂಬರ್ 2020, 5:42 IST
ಅಕ್ಷರ ಗಾತ್ರ

ಠಾಣೆ : ಮಹಾರಾಷ್ಟ್ರದ ಸಚಿವರೊಬ್ಬರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿಸಿ, ಅದರಿಂದ ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದರು.

ಈ ಸಂಬಂಧ ಪೊಲೀಸರು ಏಪ್ರಿಲ್‌ 8 ರಂದು ಪ್ರಕರಣ ದಾಖಲಿಸಿದ್ದರು. ಇಲಾಖೆಯ ಸೈಬರ್‌ ವಿಭಾಗವು ಪ್ರಕರಣ ಸಂಬಂಧ ತನಿಖೆಯನ್ನು ನಡೆಸಿತು.

‘ಕಳೆದ ವಾರ ಈ ಪ್ರಕರಣದಡಿ ಔರಾಂಗಬಾದ್‌ ಜಿಲ್ಲೆಯ ವಾಲುಜ್‌ನಲ್ಲಿ 28 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಸೈಬರ್‌ ವಿಭಾಗದ ಇನ್‌ಸ್ಪೆಕ್ಟರ್‌ ಬಾಲಕೃಷ್ಣ ವಾಘ್‌ ಅವರು ಮಾಹಿತಿ ನೀಡಿದರು. ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿಸಲು ಬಳಸಲಾಗಿದ್ದ ಫೋನ್‌ ಅನ್ನು ಪೊಲೀಸರು ವಶಕ್ಕೆ ಪಡಿದಿದ್ದಾರೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT