ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 300 ಕೋಟಿ ಸಾಲದ ಹಣ ದುರುಪಯೋಗ: ಆರೋಪಿ ಬಂಧನ

Last Updated 18 ಡಿಸೆಂಬರ್ 2020, 12:21 IST
ಅಕ್ಷರ ಗಾತ್ರ

ನವದೆಹಲಿ: ವಿವಿಧ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಿಂದ ಸಾಲ ಮತ್ತು ಸಾಲದ ಸೌಲಭ್ಯವಾಗಿ ಪಡೆದ ₹ 300 ಕೋಟಿಯನ್ನು ದುರುಪಯೋಗ ಪಡಿಸಿಕೊಂಡ ಆರೋಪದ ಮೇಲೆ ವೈಭವ್ ಶರ್ಮಾ ಎಂಬುವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.

ಕಾರು ಡೀಲರ್‌ಶಿಪ್‌ನಲ್ಲಿ ತೊಡಗಿರುವ ಗುರ್‌ಗಾಂವ್ ಮೂಲದ ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್‌ಒ) ಆಗಿದ್ದ ವೈಭವ್ 2018ರಲ್ಲಿ ಬ್ಯಾಂಕ್ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದರು. ಈ ಸಂಬಂಧ ವೈಭವ್ ಮತ್ತು ಅವರ ಕಂಪನಿಯ ನಿರ್ದೇಶಕರ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಈ ಕಾರಣಕ್ಕಾಗಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಕಂಪನಿಯ ನಿರ್ದೇಶಕರಾದ ರಾಶ್‌ಪಾಲ್ ಸಿಂಗ್ ಟಾಡ್, ಮಾಂಧೀರ್ ಸಿಂಗ್ ಟಾಡ್ ಮತ್ತು ಅದರ ಸಿಎಫ್‌ಒ ವೈಭವ್ ಶರ್ಮಾ ತಮ್ಮ ಬ್ಯಾಂಕಿಗೆ ₹ 102 ಕೋಟಿ ಮೋಸ ಮಾಡಿದ್ದಾರೆ ಎಂದು ವಂಚನೆಗೊಳಗಾಗಿದ್ದ ಬ್ಯಾಂಕ್ ದೆಹಲಿ ಪೊಲೀಸರಿಗೆ ದೂರು ಸಲ್ಲಿಸಿತ್ತು. ಈ ಬಗ್ಗೆ ತನಿಖೆ ಕೈಗೊಂಡಾಗ ವೈಭವ್ ಮತ್ತು ಆತನ ಕಂಪನಿಯ ನಿರ್ದೇಶಕರು ವಿವಿಧ ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳಿಂದ ಸಾಲದ ರೂಪದಲ್ಲಿ ಪಡೆದ ₹ 300 ಕೋಟಿಯನ್ನು ದುರುಪಯೋಗಪಡಿಸಿಕೊಂಡಿರುವುದು ತಿಳಿದು ಬಂದಿದೆ’ ಎಂದು ಪೊಲೀಸರು ವಿವರಿಸಿದ್ದಾರೆ.

ಈ ಪ್ರಕರಣದಲ್ಲಿ ನಿರ್ದೇಶಕರನ್ನು ಈ ಹಿಂದೆಯೇ ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT