ಶುಕ್ರವಾರ, ಡಿಸೆಂಬರ್ 3, 2021
20 °C

ಬೆದರು ಬೊಂಬೆಗೆ ಮೋದಿ, ಶಾ ಮುಖ: ಎಡಿಟೆಡ್ ಚಿತ್ರ ಹಂಚಿಕೊಂಡ ವ್ಯಕ್ತಿ ಸೆರೆ

ಪಿಟಿಐ Updated:

ಅಕ್ಷರ ಗಾತ್ರ : | |

ಲಖನೌ: ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರ ಪ್ರಮುಖ ವ್ಯಕ್ತಿಗಳ ಮಾರ್ಫ್ ಮಾಡಿದ ಚಿತ್ರವನ್ನು ವಾಟ್ಸ್‌ಆ್ಯಪ್‌ನಲ್ಲಿ ಹಂಚಿಕೊಂಡಿದ್ದಕ್ಕಾಗಿ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.

ಚಂದೌಸಿ ಪ್ರದೇಶದ ನಿವಾಸಿಯಾದ ಅಭಿಷೇಕ್ ಗುಪ್ತಾ ಬಂಧಿತ ಆರೋಪಿ. ಅವರು ತಮ್ಮ ವಾಟ್ಸ್‌ಆ್ಯಪ್ ಸ್ಟೇಟಸ್ ಆಗಿ ತಾವೇ ಎಡಿಟ್ ಮಾಡಿದ ನರೇಂದ್ರ ಮೋದಿ ಮತ್ತಿತರರ ಚಿತ್ರವನ್ನು ಹಂಚಿಕೊಂಡಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಚಕ್ರೇಶ್ ಮಿಶ್ರಾ ಶನಿವಾರ ಹೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಇತರರ ಮುಖಗಳನ್ನು ಬೆದರು ಬೊಂಬೆಗೆ ಅಂಟಿಸಿರುವ ಎಡಿಟ್ ಮಾಡಿದ ಚಿತ್ರಗಳನ್ನು ಅವರು ಹಂಚಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಬಂದ ದೂರಿನ ಆಧಾರದ ಮೇಲೆ ಪೊಲೀಸರು ಕ್ರಮ ಜರುಗಿಸಿದ್ದಾರೆ.

ಪ್ರಕರಣ ಸಂಬಂಧ ಆರೋಪಿ ಅಭಿಷೇಕ್ ಗುಪ್ತಾ ಅವರನ್ನು ಬಂಧಿಸಿರುವ ಚಂದೌಸಿ ಕೊತ್ವಾಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು