ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪೈಸ್‌ಜೆಟ್‌ ವಿಮಾನದ ಶೌಚಾಲಯದಲ್ಲಿ ಧೂಮಪಾನ: 62 ವರ್ಷದ ವ್ಯಕ್ತಿ ಬಂಧನ

Last Updated 31 ಜನವರಿ 2023, 15:21 IST
ಅಕ್ಷರ ಗಾತ್ರ

ಕೊಚ್ಚಿ: ಖಾಸಗಿ ವಿಮಾನದ ಶೌಚಾಲಯದ ಒಳಗೆ ಧೂಮಪಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೇರಳದ ತ್ರಿಶ್ಶೂರ್‌ ನಿವಾಸಿ 62 ವರ್ಷದ ಸುಕುಮಾರನ್ ಅವರನ್ನು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

‘ಜ.29ರಂದು ಇವರ ವಿರುದ್ಧ ಪ್ರಕರಣ ದಾಖಲಾಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.

ಜ.29ರಂದು ಇಲ್ಲಿಗೆ ಬಂದಿಳಿದ ಸ್ಪೈಸ್‌ಜೆಟ್‌ ವಿಮಾನದ ಶೌಚಾಲಯದ ಒಳಗೆ ಸುಕುಮಾರನ್‌ ಅವರು ಧೂಮಪಾನ ಮಾಡುತ್ತಿರುವುದು ಪತ್ತೆಯಾಗಿತ್ತು. ಬಳಿಕ ಆರೋಪಿಯನ್ನು ಸಿಬ್ಬಂದಿ ವಿಮಾನನಿಲ್ದಾಣದ ಅಧಿಕಾರಿಗಳಿಗೆ ಒಪ್ಪಿಸಿದ್ದರು ಎಂದು ಎಫ್ಐಆರ್‌ನಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT